ವೀರಾಜಪೇಟೆ, ಏ. ೨: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕದನೂರು ಗ್ರಾಮ ಪಂಚಾಯಿತಿಯ ಮೈತಾಡಿ ಮತ್ತು ಅರಮೇರಿ ಭಾಗದ ಕೃಷಿ ಜಮೀನಿನ ಹತ್ತಿರ ಹರಿಯುವ ನದಿಗೆ ಸಂರಕ್ಷಣೆ ಒದಗಿಸಲು ಹಾಗೂ ಪಕ್ಕದ ಕೃಷಿ ಭೂಮಿಗಳಿಗೆ ತೊಂದರೆಯಾಗದAತೆ ತಡೆಗೋಡೆ ನಿರ್ಮಾಣ ಮಾಡುವ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಸಣ್ಣ ನೀರಾವರಿ ಇಲಾಖೆ ರೂ. ೫೦ ಲಕ್ಷ ಅನುದಾನ ಮಂಜೂರು ಮಾಡಿದ ಶಾಸಕರು ಕಾಮಗಾರಿಗಳನ್ನು ಅತಿ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ, ವಲಯ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಗ್ರಾಮಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.