ನಾಪೋಕ್ಲು, ಏ. ೨: ಸಂಘ ಸಂಸ್ಥೆಯಲ್ಲಿ ಪ್ರತಿಯೊಬ್ಬ ಸದಸ್ಯರು ಸದೃಢ ಕಟ್ಟಡದ ಒಂದೊAದು ಕಂಬಗಳಿದ್ದAತೆ, ಆದ್ದರಿಂದ ಪ್ರತಿಯೊಬ್ಬ ಸದಸ್ಯರ ಪಾಲ್ಗೊಳ್ಳುವಿಕೆ ಮುಖ್ಯ ಎಂದು ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ ಹೇಳಿದರು.
ಸಮೀಪದ ಚೇರಂಬಾಣೆ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ್ದ ಚೇರಂಬಾಣೆ ಗೌಡ ಮಹಿಳಾ ನೂತನ ಒಕ್ಕೂಟವನ್ನು ಉದ್ಘಾಟಿಸಿ ನೂತನ ಸಮಿತಿಗೆ ಅಭಿನಂದನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಗ್ಗಟ್ಟಿನಲ್ಲಿ ಬಲವಿದೆ ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದರು.
ಒಕ್ಕೂಟದ ಸದಸ್ಯತ್ವ ನೋಂದಣಿ ಪುಸ್ತಕವನ್ನು ಚೇರಂಬಾಣೆ ಗೌಡ ಸಮಾಜದ ನಿರ್ದೇಶಕರಾದ ನೆಯ್ಯಣಿ ಹೇಮಲತಾ ತಾರೆಂದ್ರ ಅನಾವರಣಗೊಳಿಸಿ ಮಾತನಾಡಿ, ಈ ಒಕ್ಕೂಟ ಉತ್ತಮ ಕಾರ್ಯ ಚಟುವಟಿಕೆಗಳ ಮೂಲಕ ಪ್ರಗತಿ ಕಾಣಲಿ ಎಂದು ಆಶಿಸಿದರು.
ಬೈಮನ ಅನುಜಾ ಹರೀಶ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಚೇರಂಬಾಣೆ ವ್ಯಾಪ್ತಿಗೆ ಬರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ ಒಕ್ಕೂಟದ ಮೂಲಕ ವೇದಿಕೆ ಕಲ್ಪಿಸಿ ಕೊಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಹೊಸೊಕ್ಲು ಲತಾ ಮೊಣ್ಣಪ್ಪ ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.
ಕಾಳೇರಮ್ಮನ ರಶಿ ಅಶೋಕ್ ಪ್ರಾರ್ಥಿಸಿ, ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ ಸ್ವಾಗತಿಸಿದರು. ಬೈಮನ ಜ್ಯೋತಿ ತಿಮ್ಮಯ್ಯ ಕಾರ್ಯಕ್ರಮ ನಿರೂಪಿಸಿ, ಕೊಡಪಾಲು ತೀರ್ಥ ಗಣಪತಿ ವಂದಿಸಿದರು.