ಮಡಿಕೇರಿ, ಏ. ೭: ದೇಶದ ಸಂಸತ್ ಮತ್ತು ಕರ್ನಾಟಕ ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ಪ್ರತ್ಯೇಕ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ತಾ.೯ರಂದು ಕಡಂಗದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಬೆಳಿಗ್ಗೆ ೧೦.೩೦ ಗಂಟೆಗೆ ಕಡಂಗ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು ಶಾಂತಿಯುತವಾಗಿ ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.