ಮಡಿಕೇರಿ, ಏ. ೭: ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಈ ಶೈಕ್ಷಣಿಕ ಸಾಲಿನಿಂದ ಕಲಿಕಾರ್ಥಿ ಸಹಾಯ ಕೇಂದ್ರವನ್ನು ಪ್ರಾರಂಭಿಸಲು ಆದೇಶಿಸಿದ್ದು, ಈ ಶೈಕ್ಷಣಿಕ ಸಾಲಿನಿಂದ ದೂರ ಶಿಕ್ಷಣದ ಮೂಲಕ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮ, ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಪಡೆಯಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಸಿ. ದಯಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗೆ ೯೪೪೯೭೬೬೭೭೨ ಸಂಪರ್ಕಿಸಬಹುದಾಗಿದೆ.