ಕೇಂದ್ರದಿAದ ಸಿಲಿಂಡರ್ ಬೆಲೆ ೫೦ ರೂ ಹೆಚ್ಚಳ!

ನವದೆಹಲಿ, ಏ. ೭: ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಈಗ ಕೇಂದ್ರ ಸರ್ಕಾರವೂ ಬೆಲೆ ಏರಿಕೆಯ ಬರೆ ಎಳೆದಿದೆ. ಎಲ್ಲಾ ರೀತಿಯ ಎಲ್ ಪಿಜಿ ಗ್ರಾಹಕರಿಗೆ ದರ ಏರಿಕೆ ಮಾಡಲಾಗಿದೆ. ಅಡುಗೆ ಅನಿಲ ಅಥವಾ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ ೫೦ ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಬೆಲೆ ಏರಿಕೆ ಸಬ್ಸಿಡಿ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಅನ್ವಯವಾಗಲಿದೆ. ಉಜ್ವಲ ಅಡಿಯಲ್ಲಿ ೧೪.೨ ಕೆಜಿ ಎಲ್‌ಪಿಜಿ ಬೆಲೆ ೫೦೦ ರಿಂದ ೫೫೦ ಕ್ಕೆ ಮತ್ತು ಉಜ್ವಲ ಯೋಜನೆಯ ಹೊರತಾದ ಬಳಕೆದಾರರಿಗೆ ೮೦೩ರಿಂದ ೮೫೩ ಕ್ಕೆ ಹೆಚ್ಚಾಗಲಿದೆ ಎಂದು ಪುರಿ ತಿಳಿಸಿದ್ದಾರೆ.

ಇಂದು ಪಿಯುಸಿ ಫಲಿತಾಂಶ

ಬೆAಗಳೂರು, ಏ. ೭: ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶ ೨೦೨೫ರ ಬಿಡುಗಡೆಗಾಗಿ ಕಾತರದಿಂದ ಕಾಯುತಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ತಾ. ೮ ರಂದು (ಇಂದು) ಬಿಡುಗಡೆ ಮಾಡುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಕೆಎಸ್‌ಇಎಬಿ ಕರ್ನಾಟಕ ಮಂಡಳಿಯ ೧೨ನೇ ತರಗತಿಯ ಪರೀಕ್ಷಾ ಫಲಿತಾಂಶ ೨೦೨೫ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಲಿದೆ. ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾದ ನಂತರ, ವಿದ್ಯಾರ್ಥಿಗಳು ಮತ್ತು ಪೋಷಕರು ಕೆಎಸ್‌ಇಎಬಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ಪರಿಶೀಲಿಸಬಹುದು. ೨೦೨೫ರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕರ್ನಾಟಕ ಮಂಡಳಿಯು ಮಾರ್ಚ್ ೧ ರಿಂದ ಮಾರ್ಚ್ ೨೦ರವರೆಗೆ ನಡೆಸಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳನ್ನು ಅಧಿಕೃತವಾಗಿ ಘೋಷಿಸಲು ತಾ. ೮ರ ಮಧ್ಯಾಹ್ನ ೧೨.೩೦ರ ಸುಮಾರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶಗಳನ್ನು ಅಧಿಕೃತ ಪೋರ್ಟಲ್‌ಗಳಾದ ಞಚಿಡಿಡಿesuಟಣs.ಟಿiಛಿ.iಟಿ ಮತ್ತು ಞseಚಿb.ಞಚಿಡಿಟಿಚಿಣಚಿಞಚಿ.gov.iಟಿ. ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು.

ಬೀದಿ ವ್ಯಾಪಾರಿಗಳಿಗೆ ವಿದ್ಯುತ್ ಚಾಲಿತ ವಾಹನ : ಸಿಎಂ

ಬೆAಗಳೂರು, ಏ. ೭: ಬೀದಿ ಬದಿ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಅವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರವು ವಿದ್ಯುತ್ ಚಾಲಿತ ವಾಹನಗಳನ್ನು ಒದಗಿಸುವ ಪ್ರಕ್ರಿಯೆಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕದಲ್ಲಿ ಬೀದಿ ವ್ಯಾಪಾರಿಗಳ ಸ್ಥಿತಿಯ ಬಗ್ಗೆ ರಾಹುಲ್ ಗಾಂಧಿ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ ೨೭,೬೫೫ ಮಾರಾಟಗಾರರನ್ನು ನೋಂದಾಯಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಬೀದಿ ವ್ಯಾಪಾರಿಗಳ ಒಟ್ಟಾರೆ ಯೋಗಕ್ಷೇಮಕ್ಕೆ ಬದ್ಧವಾಗಿದೆ ಮತ್ತು ಅವರ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ. ೨೦೧೩ ಮತ್ತು ೨೦೧೮ರ ನಡುವೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೀದಿ ವ್ಯಾಪಾರಿಗಳ ಪರವಾಗಿ ನಿಯಮಗಳನ್ನು ರೂಪಿಸಿದ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂದು ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ತಿಳಿಸಿದ್ದಾರೆ.