ಮಡಿಕೇರಿ, ಏ. ೭: ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ, ಜಿಲ್ಲೆಯ ಗೋಣಿಮರೂರು ನಿವಾಸಿ ವಿನಯ್ ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ‘ವಾಟ್ಸಾö್ಯಪ್’ ನಲ್ಲಿ ದೊರೆತ ಡೆತ್‌ನೋಟ್ ಕುರಿತ ಮಾಹಿತಿಗಳನ್ನು ಪೊಲೀಸರು ಕಲೆಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತಗೊಂಡಿದ್ದಾರೆ. ಇದರೊಂದಿಗೆ ಜಿಲ್ಲಾ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಪತ್ತೆ ಕಾರ್ಯವೂ ನಡೆಯುತ್ತಿದೆ.

ವಿನಯ್ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಕೊನೆಯ ಮೊಬೈಲ್ ಕರೆಗಳು, ಯಾರೊಂದಿಗೆ ನೇರವಾಗಿ ಮಾತನಾಡಿದ್ದರು ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ವಿನಯ್ ಮೊಬೈಲ್, ಲ್ಯಾಪ್‌ಟಾಪ್, ಮರಣಪತ್ರವನ್ನು ವಿಧಿ ವಿಜ್ಞಾನ ಪ್ರ‍್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಮುಂದಿನ ೧-೨ ದಿನಗಳಲ್ಲಿ ವರದಿ ಬರುವ ನಿರೀಕ್ಷೆ ಇದೆ. ವಿನಯ್ ಸಾವಿಗೆ ಶರಣಾದ ಗೋದಾಮಿನಲ್ಲಿ ಉಳಿಯಲು ಕಾರಣವೇನು? ಕಂಪೆನಿಯಲ್ಲಿ ಅವರೊಂದಿಗೆ ಯಾರೆಲ್ಲ ಇದ್ದರು? ಎಂಬುದರ ಕುರಿತು ಪರಿಶೀಲನೆ ನಡೆಯುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.