ವೀರಾಜಪೇಟೆ: ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ೧೧೮ನೇ ಜನ್ಮ ದಿನಾಚರಣೆಯನ್ನು ವಿರಾಜಪೇಟೆ ಪುರಸಭೆಯಲ್ಲಿ ಆಚರಿಸಲಾಯಿತು.
ಜನ್ಮದಿನಾಚರಣೆ ಅಂಗವಾಗಿ ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಾಯಿತು.
ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿ ದಿವಂಗತ ಮಾಜಿ ಉಪ ಪ್ರಧಾನಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ಡಾ|| ಜಗಜೀವನ್ ರಾಮ್ ಅವರು ಬಡವರ, ಹಿಂದುಳಿದ ವರ್ಗದವರ ಹಾಗೂ ದಲಿತರ ಕಲ್ಯಾಣಕ್ಕಾಗಿ ಹೋರಾಡಿದ ಒಬ್ಬ ರಾಷ್ಟç ನಾಯಕ. ಸ್ವಾತಂತ್ರ ಹೋರಾಟದಲ್ಲೂ ಪ್ರಮುಖ ಪಾತ್ರವಹಿಸಿದ್ದ ಇವರು, ದೇಶದಲ್ಲಿ ಹಸಿರು ಕ್ರಾಂತಿ ತರುವ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣ ವಾಗಬೇಕೆಂದು ಹೋರಾಡಿದ ಮುತ್ಸದಿ ರಾಜಕಾರಣಿ. ಹಲವಾರು ಕ್ರಾಂತಿಕಾರಿ ಯೋಜನೆಗಳೊಂದಿಗೆ ಸಮಾಜಮುಖಿಯಾಗಿ ಕೆಲಸ ಮಾಡಿದ ಇವರು ನಮ್ಮೆಲ್ಲರಿಗೂ ಆದರ್ಶಪ್ರಾಯರು ಎಂದು ಬಣ್ಣಿಸಿದರು. ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು, ವೀರಾಜಪೇಟೆ ತಹಶೀಲ್ದಾರ್ ಅನಂತ ಶಂಕರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಅಸ್ಪöÈಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕ ಜಗಜೀವನ ರಾಮ್ ೧೧೮ನೇ ಜಯಂತೋತ್ಸವವನ್ನು ದೇಶದಾದ್ಯಂತ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ÷್ಯ ಪೂರ್ವ ಮತ್ತು ಸ್ವಾತಂತ್ರ÷್ಯ ನಂತರದ ರಾಜಕಾರಣದಲ್ಲಿ ಬಾಬು ಜಗಜೀವನ ರಾಮ್ ಪಾತ್ರ ಪ್ರಮುಖವಾದದ್ದು. ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪöÈಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನ ರಾಮ್ ಒಬ್ಬರು. ದಲಿತರ ಸಮಾನತೆಗಾಗಿ ಹೋರಾಡುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದ ಅಖಿಲ ಭಾರತ ದಮನಿತ ವರ್ಗಗಳ ಒಕ್ಕೂಟವನ್ನು ಸ್ಥಾಪಿಸುವಲ್ಲಿ ಜಗಜೀವನ್ರಾಮ್ ಅವರು ನಿರ್ವಹಿಸಿದ ಪಾತ್ರ ಮಹತ್ವದಾಗಿತ್ತು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರೀತಿ ಚಿಕ್ಕಮಾದಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕ ಅರ್ಜುನ್ ಮೌರ್ಯ ಮುಖ್ಯ ಭಾಷಣ ಮಾಡಿದರು.
ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ವೀರಾಜಪೇಟೆ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮುಖ್ಯಾಧಿಕಾರಿ ನಾಚಪ್ಪ, ಪುರಸಭೆ ಸದಸ್ಯರುಗಳು ಮತ್ತು ಅಧಿಕಾರಿ ವರ್ಗದವರು ಹಾಗೂ ಪ್ರಮುಖರು ಉಪಸಿತರಿದ್ದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ತಾಲೂಕು ಕಚೇರಿ ಸಿಬ್ಬಂದಿಗಳು, ಪುರಸಭೆ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.