ವೀರಾಜಪೇಟೆ, ಏ. ೧೨: ವೀರಾಜಪೇಟೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ವೀರಾಜಪೇಟೆ ಪುರಸಭೆ, ವೀರಾಜಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವೀರಾಜಪೇಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಡಾ. ಅಂಬೇಡ್ಕರ್ ಭವನ ಹಾಗೂ ಅಂಬೇಡ್ಕರ್ ಅವರ ಪುತ್ಥಳಿಯನ್ನು ತಾ.೧೪ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಭವನದ ನಿರ್ವಹಣೆ ಸಮಿತಿ ಸದಸ್ಯ ವಿ.ಕೆ. ಸತೀಶ್‌ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ೧೦.೩೦ ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಪುತ್ಥಳಿ ಅನಾವರಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ ಸುಜಾ ಕುಶಾಲಪ್ಪ, ಎಸ್.ಎಲ್ ಬೋಜೇಗೌಡ, ಡಾ ಧನಂಜಯ ಸರ್ಜ, ಪುರಸಭೆ ಅಧ್ಯಕ್ಷೆ ದೇಚಮ್ಮ ಉಪಾಧ್ಯಕ್ಷೆ ಫಸಿಹಾ ತಬುಸಂ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಅಲೀರ ರಶೀದ್, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ ಎನ್.ವಿ ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಕೊಡಗು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ್ ಮೀನಾ ಪಾಲ್ಗೊಳ್ಳಲಿದ್ದಾರೆ.

ಸಮಾರಂಭದಲ್ಲಿ ಮೈಸೂರಿನ ಅರವಿಂದ ಮಾಲಗತ್ತಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.

ಗೋಷ್ಠಿಯಲ್ಲಿ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಸದಸ್ಯರಾದ ಹೆಚ್.ಎನ್ ವೀರಭದ್ರಯ್ಯ, ಹೆಚ್.ಎಂ ಮಹಾದೇವ ಉಪಸ್ಥಿತರಿದ್ದರು.