ಮಡಿಕೇರಿ: ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಶಿವಮೊಗ್ಗ ನೇತೃತ್ವದ ಕೊಡಗು ಜಿಲ್ಲಾ ಸಮಿತಿಯಿಂದ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜನ್ಮದಿನಾಚರಣೆಯ ಅಂಗವಾಗಿ ಪುಷ್ಪನಮನ ಸಲ್ಲಿಸಲಾಯಿತು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವೀರಾಜಪೇಟೆ ತಾಲೂಕು ಹಾಗೂ ಪೊನ್ನಂಪೇಟೆ ತಾಲೂಕು ಸಂಯುಕ್ತ ಆಶ್ರಯದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಮಿತಿಯ ಸಂಚಾಲಕಿ ಗಾಯತ್ರಿ ನರಸಿಂಹ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಬೆಂಗಳೂರಿನ ಡಾ. ಬಾಬು ಜಗಜೀವನ್ ರಾಮ್ ಸಂಶೋಧನಾ ಕೇಂದ್ರ ಸುಮನಹಳ್ಳಿ ಮಾಗಡಿರಸ್ತೆಯಲ್ಲಿ ತಾ. ೨೩ ರಂದು ನಡೆಯಲಿರುವ ‘ಕೋಮುವಾದ ಧಿಕ್ಕರಿಸಿ, ಸಂವಿಧಾನ ರಕ್ಷಿಸಿ ದಲಿತರ ಅಭಿವೃದ್ಧಿಗಾಗಿ', "ಜನಕ್ರಾಂತಿ ಸಮಾವೇಶ" ಬೆಂಗಳೂರು ಚಲೋ ಕಾರ್ಯಕ್ರಮದ ಕರಪತ್ರ ಬಿಡುಗಡೆ ಮಾಡಿ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ದಲಿತ ಬಂಧುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವೀಗೊಳಿಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಹಾಜರಿದ್ದರು.ವೀರಾಜಪೇಟೆ: ದೇಶದ ಶೋಷಿತ ವರ್ಗದವರಿಗೆ ನ್ಯಾಯ ಕಲ್ಪಿಸಿಕೊಡಲು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕಂಡುಕೊAಡ ಮಾರ್ಗವೆಂದರೆ ಶಿಕ್ಷಣ ಎಂದು ಸಾಹಿತಿ ಡಾ. ಜೆ. ಸೋಮಣ್ಣ ಹೇಳಿದರು.

ವೀರಾಜಪೇಟೆ ಪಂಜರಪೇಟೆಯಲ್ಲಿರುವ ಸರ್ವೋದಯ ಬಿಎಡ್ ಕಾಲೇಜಿನಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿ, ಶಿಕ್ಷಣದ ಮೂಲಕ ಜ್ಞಾನ ಸಂಪಾದಿಸಿಕೊAಡು ಅನ್ಯಾಯ ಮತ್ತು ಅಸಮಾನತೆಯ ವಿರುದ್ಧ ಹೋರಾಟ ನಡೆಸುವ ಶಕ್ತಿಯನ್ನು ಅಂಬೇಡ್ಕರ್ ಪಡೆದುಕೊಂಡರು. ಹೀಗಾಗಿ ಅಂಬೇಡ್ಕರ್ ಅವರಷ್ಟು ಪದವಿಯನ್ನು ಬೇರೆ ಯಾರು ಗಳಿಸಲು ಸಾಧ್ಯವಾಗಲಿಲ್ಲ. ಜ್ಞಾನ ಮತ್ತು ಅರ್ಥಿಕ ಬಲವರ್ಧನೆಗೆ ಶಿಕ್ಷಣವೇ ಶಕ್ತಿ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಹೆಣ್ಣು ಮಕ್ಕಳಿಗೆ ಆಸ್ತಿಹಕ್ಕು ನೀಡಲು ಮತ್ತು ದುಡಿಮೆಯಲ್ಲಿ ಮಹಿಳೆಯರಿಗೂ ಸಮಾನ ವೇತನ ನೀಡುವಂತೆ ಶಾಸನ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿದರು. ಮಹಿಳೆಯರಿಗೂ ಮತದಾನದ ಹಕ್ಕು ನೀಡಿದ ಮಹಾತ್ಮ ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನಾತ್ಮಕ ಹಕ್ಕಿನ ಕೊಡುಗೆಯಾಗಿದೆ ಎಂದು ಡಾ. ಜೆ. ಸೋಮಣ್ಣ ಹೇಳಿದರು.

ಸರ್ವೋದಯ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಡಾ. ಎಂ. ವಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವುಗಳು ಪಡೆಯುತ್ತಿರುವ ಎಲ್ಲ ಹಕ್ಕುಗಳು ಸಂವಿಧಾನತ್ಮಕವಾಗಿಯೇ ಇವೆ. ಇದಕ್ಕೆ ಮುಖ್ಯ ಕಾರಣ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳುವ ಮೂಲಕ ದೇಶದ ಸುಭದ್ರತೆಯನ್ನು ಕಾಪಾಡಿಕೊಳ್ಳುವ ಹೊಣೆಗಾರಿಕೆ ಎಲ್ಲರದ್ದಾಗಿದೆ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿಯ ಖಜಾಂಚಿ ಕೆ. ವಾಸಂತಿ ಶುಭಚಂದ್ರ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಪದ್ಮಲತಾ, ಸುಜಾತ, ಕೆ.ಟಿ. ಮಿನಿ, ಹೆಚ್.ಆರ್. ಗಿರೀಶ್, ಗ್ರಂಥಪಾಲಕ ರಾಜಶೇಖರ್, ವಿದ್ಯಾರ್ಥಿ ಮುಖಂಡರಾದ ಮನೋಜ್, ರೇಣುಕಾ, ಉಲ್ಲಾಸ್, ತೇಜಸ್ವಿನಿ, ಲೈನ್ಸಿ, ರಾಶೀಲ ಮತ್ತಿತರರು ಹಾಜರಿದ್ದರು.ಕೊಡ್ಲಿಪೇಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.

ಸಮೀಪದ ದೊಡ್ಡಕೊಡ್ಲಿ ಗ್ರಾಮದಲ್ಲಿ ನಿರ್ಮಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮಾಡಿ ನಂತರ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಸಮಾಜ ಸುಧಾರಣೆಗೆ ಹೊಂದಿದ್ದ ಗುರಿಯನ್ನು ಇನ್ನೂ ತಲುಪಲು ಸಾಧ್ಯವಾಗಿಲ್ಲ. ಇದಕ್ಕಾಗಿ ದೊಡ್ಡಮಟ್ಟದ ಬದಲಾವಣೆ ತರುವುದು ಅಗತ್ಯ. ವಿದೇಶದಲ್ಲಿ ಶಿಕ್ಷಣ ಪಡೆದರೂ ಸಹ ಅಲ್ಲೇ ಉಳಿಯದೆ ಸ್ವದೇಶಕ್ಕೆ ಬಂದು ಅಸಮಾನತೆಯ ವಿರುದ್ಧ ಹೋರಾಡಿದ ನಾಯಕ ಎಂದು ಬಣ್ಣಿಸಿದರು.

ಮುಖ್ಯ ಭಾಷಣಕಾರರಾಗಿ ಭಾಗಿಯಾಗಿದ್ದ ಚನ್ನಪಟ್ಟಣದ ಜಯರಾಮ್ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕನ್ನು ನೀಡಿದ ಕೀರ್ತಿ ಅಂಬೇಡ್ಕರ್‌ರವರಿಗೆ ಸಲ್ಲುತ್ತದೆ. ಈ ವ್ಯವಸ್ಥೆಯನ್ನು ಸಂವಿಧಾನದ ಮೂಲಕ ಜಾರಿಗೆ ತಂದಿದ್ದರಿAದ ವಿಶ್ವದ ಬಲಿಷ್ಠ ಪ್ರಜಾಪ್ರಭುತ್ವ ದೇಶವಾಗಲು ಕಾರಣವಾಗಿದೆ ಎಂದರು.

ಶನಿವಾರಸAತೆ ಪೊಲೀಸ್ ಠಾಣೆಯ ಪ್ರೊಬೇಷನರಿ ಎಎಸ್ಪಿ ಡಾ. ಬೆನಕ ಪ್ರಸಾದ್ ಮಾತನಾಡಿ, ಕಷ್ಟದಲ್ಲಿ ಬೆಳೆದು, ಶ್ರಮಪಟ್ಟು ವಿದ್ಯಾಭ್ಯಾಸ ಮಾಡಿ ಹಲವಾರು ಪದವಿಗಳನ್ನು ಸಂಪಾದಿಸಿ ಜಗತ್ತಿಗೆ ಬೆಳಕಾಗಿದ್ದ ಅಂಬೇಡ್ಕರ್ ಅವರನ್ನು ಒಂದು ಜನಾಂಗಕ್ಕೆ ಸೀಮಿತಗೊಳಿಸಬಾರದು. ಅವರು ಇಡೀ ಮನುಕುಲಕ್ಕೆ ಸೇರಿದವರು ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಗ್ರಾ.ಪಂ. ಸದಸ್ಯ ಡಿ.ಕೆ. ಪ್ರಸನ್ನ ವಹಿಸಿದ್ದರು. ಪ್ರಾಂಶುಪಾಲ ಡಿ.ಸಿ. ಸುರೇಶ್, ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ಅಪ್ಸರಿ ಬೇಗಂ, ಸದಸ್ಯರುಗಳಾದ ಕೆ.ಆರ್. ಚಂದ್ರಶೇಖರ್, ಗ್ರಾ.ಪಂ. ಸದಸ್ಯರಾದ ಅಶ್ವಿನಿ ಮಂಜುನಾಥ್, ಗೀತಾ ತ್ಯಾಗರಾಜ್, ನಗೀನಾ ಭಾನು, ಸುನಂದ, ಹನೀಫ್ ಕಿರಿಕೊಡ್ಲಿ, ರಾಜೇಂದ್ರ, ಪ್ರಮುಖರಾದ ಔರಂಗಜೇಬ್, ಜೆ.ಎಲ್. ಜನಾರ್ದನ್, ಪ್ರತಿಮೆ ನಿರ್ಮಾಣ ಸಮಿತಿಯ ಕಾರ್ಯದರ್ಶಿ ಡಿ.ಎನ್. ವಸಂತ್, ಜಗದೀಶ್, ಮಂಜುನಾಥ್ ಹಾಗೂ ಪದಾಧಿಕಾರಿಗಳು ಇದ್ದರು.

ಇದಕ್ಕೂ ಮುನ್ನ ದೊಡ್ಡಕುಂದ ಗ್ರಾಮದಿಂದ ಪಟ್ಟಣದ ಬಸ್ ನಿಲ್ದಾಣದ ಮೂಲಕ ದೊಡ್ಡಕೊಡ್ಲಿ ಗ್ರಾಮದವರೆಗೆ ಅಂಬೇಡ್ಕರ್ ರವರ ಸ್ತಬ್ಧಚಿತ್ರ ಹಾಗೂ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು.ಕೊಡ್ಲಿಪೇಟೆ: ಸಮೀಪದ ದೊಡ್ಡಕುಂದ ಗ್ರಾಮದ ಭೀಮ್ ಆರ್ಮಿ ಯುವಕರ ಸಂಘದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.

ಮುಖ್ಯ ಭಾಷಣಕಾರರಾಗಿದ್ದ ಮಲ್ಲಿಪಟ್ಟಣ ಸರಕಾರಿ ಕಾಲೇಜಿನ ಪ್ರಾಂಶುಪಾಲೆ ಚಂದ್ರಕಲಾ ಜನಾರ್ದನ್ ಮಾತನಾಡಿ, ಅಂಬೇಡ್ಕರ್ ಅವರು ಸಮಾನತೆಯ ಮೂಲಕ ಸಾಮಾಜಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದರು. ದೇಶದ ಆರ್ಥಿಕತೆಯ ಬಗ್ಗೆ ಅವರು ಅಂಬೇಡ್ಕರ್ ಬರೆದ ಕೃತಿಯು, ಭಾರತದ ಆರ್ಥಿಕ ಬಲವರ್ಧನೆಗೆ ಕಾರಣವಾಯಿತು ಎಂದು ಅಭಿಪ್ರಾಯಿಸಿದರು.

ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆಯಿಂದಾಗಿ ದೇಶದಲ್ಲಿ ಮೀಸಲಾತಿ, ಶಿಕ್ಷಣ, ಆಸ್ತಿ ಹಕ್ಕು, ಸಮಾನತೆ ಕಾಣಲು ಸಾಧ್ಯವಾಗಿದೆ ಎಂದರು.

ತಾಲೂಕು ಕೆ.ಡಿ.ಪಿ. ಸದಸ್ಯ ಡಿ.ಆರ್. ವೇದಕುಮಾರ್, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಹನೀಫ್, ನಿವೃತ್ತ ಬ್ಯಾಂಕ್ ನೌಕರ ಹೊನ್ನಪ್ಪ, ಸ್ಥಳೀಯ ದೇವಸ್ಥಾನ ಸಮಿತಿ ಅಧ್ಯಕ್ಷ ಜಗದೀಶ್, ಹೋಬಳಿ ಮಹಿಳಾ ಸಂಘದ ಅಧ್ಯಕ್ಷೆ ವೇದಾವತಿ ವಿಷ್ಣುವರ್ಧನ್, ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯ ಜೆ.ಎಲ್. ಜನಾರ್ದನ್ ಅವರುಗಳು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮ್ ಆರ್ಮಿ ಯುವಕ ಸಂಘದ ಅಧ್ಯಕ್ಷ ಯೋಗಾನಂದ ವಹಿಸಿದ್ದರು. ಆರೋಗ್ಯ ಇಲಾಖೆಯ ನೌಕರ ನವೀನ್, ಸಂಘದ ಉಪಾಧ್ಯಕ್ಷ ದಿವಾಕರ್, ಖಜಾಂಚಿ ಪ್ರಶಾಂತ್, ಪದಾಧಿಕಾರಿಗಳಾದ ಧರ್ಮ ಡಿ.ಆರ್., ದರ್ಶನ್, ಜಯಂತ್, ಅಕ್ಷಯ್, ನಾಗೇಶ್, ಕೀರ್ತಿ, ಕುಮಾರ್, ಕಿರಣ್, ನಂದೀಶ್, ರವಿ, ಪ್ರಮೋದ್, ಯುವರಾಜ್ ಸೇರಿದಂತೆ ಇತರರು ಇದ್ದರು.

ಕಾರ್ಯಕ್ರಮದಲ್ಲಿ ಅಥ್ಲೆಟಿಕ್ ಕ್ರೀಡೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿ ಹರ್ಷಿತ್ ಅವರನ್ನು ಸನ್ಮಾನಿಸಲಾಯಿತು.ಮಡಿಕೇರಿ: ನಗರದ ಮಹಿಳಾ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಡಿ.ಕೆ. ಸರಸ್ವತಿ ಅವರು ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ಪಿತಾಮಹರಾಗಿದ್ದು, ಅವರ ಕೊಡುಗೆ ದೇಶಕ್ಕೆ ಅಪಾರವಾಗಿದೆ. ಸಂವಿಧಾನ ರಚನೆ ಮಾಡುವುದರ ಮೂಲಕ ದೇಶ ಇಂದು ಅವರನ್ನು ಸ್ಮರಿಸುತ್ತದೆ ಎಂದರು. ರಾಜ್ಯಶಾಸ್ತçದ ಸಹ ಪ್ರಾಧ್ಯಾಪಕಿ ನಿರ್ಮಲ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಪ್ರಜಾಪ್ರಭುತ್ವದ ತತ್ವಗಳಾದ ಸಮಾನತೆ, ಸ್ವಾತಂತ್ರö್ಯ ಮತ್ತು ಭ್ರಾತೃತ್ವ ದೇಶಕ್ಕೆ ಅವಶ್ಯಕ ಹಾಗೂ ಶೋಷಣೆ ಮುಕ್ತವಾದ ಸಮಾಜ ರಚನೆಯಾಗಿದೆ. ಇದರಿಂದ ದೇಶ ಅಭಿವೃದ್ಧಿಯನ್ನು ಸಾಧಿಸುವಂತಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರಸ್ತಾವನೆ ಓದುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಸೋಮವಾರಪೇಟೆ: ಯಡೂರು ಬಿ.ಟಿ. ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜನ್ಮ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಮಡಿಕೇರಿ ಮಹಾಭೋಧಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಮೋಹನ್ ಮೌರ್ಯ ಮಾತನಾಡಿ, ಅಂಬೇಡ್ಕರ್ ಅವರ ಪ್ರಮುಖ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ದೇಶದಲ್ಲಿ ಉದ್ಯೋಗ, ಮತಾಧಿಕಾರ, ಕಾನೂನಿನಲ್ಲಿ ಸಮಾನತೆ, ಮಹಿಳಾ ಮತ್ತು ಕಾರ್ಮಿಕರ ಸುಧಾರಣಾ ಕ್ರಮಗಳನ್ನು ಜಾರಿಗೆ ತರುವ ಮೂಲಕ ನೊಂದವರ ಪರವಾಗಿ ಸಂವಿಧಾನವನ್ನು ತಂದರು. ದೇಶದಲ್ಲಿ ಮೀಸಲಾತಿಯ ಮೂಲಕ ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳುವ ಮೂಲಕ, ಅಂಬೇಡ್ಕರ್ ಅವರ ಸಾಧನೆಗೆ ಗೌರವ ತರಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಡಿ. ಹರ್ಷ ವಹಿಸಿ ಮಾತನಾಡಿ, ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ತುಳಿತಕ್ಕೊಳಗಾದವರಾಗಿದ್ದಾರೆ. ತಮಗೆ ಸಿಕ್ಕಿದ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ, ಪ್ರಪಂಚದಲ್ಲಿ ಉತ್ತಮ ಸಂವಿಧಾನ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಈ ಸಂದರ್ಭ ಸಹ ಪ್ರಾಧ್ಯಾಪಕರಾದ ಎಂ.ಎA. ಸುನೀತ, ಧನಲಕ್ಷ್ಮೀ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹುಚ್ಚೇಗೌಡ ಇದ್ದರು.