ಪೊನ್ನಂಪೇಟೆ, ಏ. ೨೨: ಮಾನವೀಯ ಸ್ನೇಹಿತರ ಒಕ್ಕೂಟ ವತಿಯಿಂದ ತಾ. ೨೫ ರಂದು ಪೊನ್ನಂಪೇಟೆಯ ಇಗ್ಗುತಪ್ಪ ಕೊಡವ ಸೌಹಾರ್ದ ಸಹಕಾರಿ ಸಂಘದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜ್ಞಾನಜ್ಯೋತಿ ಕಾರುಣ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು, ಪೋಷಕರಿಲ್ಲದ ಹಾಗೂ ಒಂಟಿ ಪೋಷಕರಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಹಾಗೂ ವಿಶೇಷಚೇತನ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಬ್ಯಾಗ್, ಕೊಡೆ, ಬೆಡ್ ಶೀಟ್ ಹಾಗೂ ಇನ್ನಿತರ ಲೇಖನ ಪರಿಕರಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ.
ಈಗಾಗಲೇ ಜಿಲ್ಲೆಯ ೪೦ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದ ಫಲಾನುಭವಿಗಳಾಗಿ ಗುರುತಿಸಲಾಗಿದೆ ಎಂದು ಒಕ್ಕೂಟದ ವಕ್ತಾರ ಶಶಿ ಕುಮಾರ್ ಚೆಟ್ಟಳ್ಳಿ ಹಾಗೂ ಎಂ. ಇ. ಮಹಮದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.