ಮಡಿಕೇರಿ, ಏ. ೨೨: ಸಾಹಿತಿ ಟಿ. ಶೆಟ್ಟಿಗೇರಿಯ ಉಳುವಂಗಡ ಕಾವೇರಿ ಉದಯ ಅವರಿಗೆ ದಾವಣಗೆರೆಯಲ್ಲಿ ಕನ್ನಡ ಬಹುಭಾಷಾ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿದ್ಯಾಧರ ಕನ್ನಡ ಪ್ರತಿಷ್ಠಾನ, ದಾವಣಗೆರೆ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಸ್ಫೂರ್ತಿ ಪ್ರಕಾಶನ ತೆಲಿಗಿ, ಜ್ಞಾನ ಪ್ರಕಾಶನ ಮತ್ತು ಜ್ಞಾನ ಪ್ರಕಾಶನ ಸಂಸ್ಥೆಯ ವತಿಯಿಂದ ಮಾತೋಶ್ರೀ ಜಾನಕಿಬಾಯಿ ರಂಗರಾವ ಮುತಾಲಿಕ ದೇಸಾಯಿ ಸಂಸ್ಮರಣೆಯ ಅಂಗವಾಗಿ ದಾವಣಗೆರೆಯ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ನಡೆದ ಕನ್ನಡ ನುಡಿತೇರು ಕಾರ್ಯಕ್ರಮದಲ್ಲಿ ವಿದ್ಯಾಧರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ವಿದ್ಯಾಧರ ಮುತಾಲಿಕ ದೇಸಾಯಿ ಅವರು ಉಳುವಂಗಡ ಕಾವೇರಿ ಉದಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ದಾವಣಗೆರೆಯ ಸ್ಫೂರ್ತಿ ಪ್ರಕಾಶನದ ಅಧ್ಯಕ್ಷ ಎಂ. ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಉದ್ಘಾಟಿಸಿದರು.