ಕುಶಾಲನಗರ, ಏ. ೨೩: ಕಾಶ್ಮೀರದಲ್ಲಿ ಉಗ್ರರಿಂದ ನಡೆದ ದುಷ್ಕೃತ್ಯ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಕುಶಾಲನಗರ ಬಿಜೆಪಿ ಕಾರ್ಯಕರ್ತರು ಪಟ್ಟಣದ ಗಣಪತಿ ದೇವಾಲಯದ ಮುಂಭಾಗ ಸೇರಿ ಉಗ್ರರಿಂದ ಅಮಾನುಷ ಹತ್ಯೆಗೆ ಒಳಗಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೌನಚರಣೆ ಮತ್ತು ದೀಪ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕುಶಾಲನಗರ ಬಿಜೆಪಿ ನಗರ ಅಧ್ಯಕ್ಷ ಎಂ.ಎA. ಚರಣ್ ಅವರ ನೇತೃತ್ವದಲ್ಲಿ ಭಯೋತ್ಪಾದಕರ ವಿರುದ್ಧ ಘೋಷಣೆ ಕೂಗಿದರು. ನಂತರ ದೀಪ ಹಚ್ಚಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು. ಪುರಸಭೆ ಸದಸ್ಯ ಜಯವರ್ಧನ್, ಅಮೃತರಾಜ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮಧು ಸೂದನ್ ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

ಎಸ್‌ಡಿಪಿಐನಿಂದ ಮೌನಾಚರಣೆ

ಕುಶಾಲನಗರ ತಾಲೂಕು ಎಸ್.ಡಿ.ಪಿ.ಐ ಕಾರ್ಯಕರ್ತರು ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದ ಮುಂಭಾಗ ಸೇರಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಆಚರಿಸಿ ನಂತರ ಘಟನೆಯನ್ನು ಖಂಡಿಸಿದರು.

ಕೇAದ್ರ ಸರ್ಕಾರದ ಭದ್ರತಾ ವೈಫಲ್ಯ ಇಂತಹ ದುಷ್ಕೃತ್ಯಗಳಿಗೆ ಕಾರಣ ಎಂದು ಆರೋಪಿಸಿದ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ, ಘಟನೆಗೆ ಕಾರಣಕರ್ತರಾದ ದಾಳಿಕೋರರಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿದರು.

ಕಾರ್ಯಕರ್ತರು ಮೇಣದಬತ್ತಿ ಉರಿಸುವ ಮೂಲಕ ಶ್ರದ್ದಾಂಜಲಿ ಕೋರಿದರು.

ತಾಲೂಕು ಅಧ್ಯಕ್ಷ ಜಖರಿಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.