ಮಡಿಕೇರಿ, ಏ. ೨೩: ದ್ವಿತೀಯ ಪಿ.ಯು.ಸಿ. ಪರೀಕ್ಷೆ-೨ ಸಂಬAಧಿಸಿದAತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ-೨ನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಪರೀಕ್ಷೆ-೧ ನಡೆಸಿದಂತೆ ಪರೀಕ್ಷೆ-೨ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು ಮಾತನಾಡಿ, ತಾ. ೨೪ ರಿಂದ ಮೇ ೮ ರವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ-೨ ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆಯಲ್ಲಿ ನಡೆಯಲಿದ್ದು, ಒಟ್ಟು ೩೪೭೦ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.
ವೆಬ್‌ಕಾಸ್ಟಿಂಗ್ ಸಹ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ. ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಪ್ರಾಂಶುಪಾಲರು ಇತರರು ಇದ್ದರು.