ವೀರಾಜಪೇಟೆ, ಏ. ೨೩: ಕೊಡಗು ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳ ನಿಯೋಗವು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ತಮ್ಮ ಹಲವು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.
ತಮ್ಮ ಪ್ರಮುಖ ಬೇಡಿಕೆಗಳಾದ ಉದ್ಯೋಗದಲ್ಲಿ ಭದ್ರತೆ ಹಾಗೂ ಭತ್ಯೆಯಲ್ಲಿ ಏರಿಕೆ ಸಂಬAಧವಾಗಿ ಹಾಗೂ ಹಲವು ಇತರ ಬೇಡಿಕೆಗಳ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಶಾಸಕರು, ಶಿಕ್ಷಕರುಗಳ ಅಹವಾಲನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡುವುದಾಗಿ ಹಾಗೂ ತನ್ನ ಕಡೆಯಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಕೆಪಿಸಿಸಿ ವಕ್ತಾರ ಹಾಗೂ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಉಪಸ್ಥಿತರಿದ್ದರು.