ನಾಪೋಕ್ಲು, ಏ. ೨೩: ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದು ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಕೆಪಿಎಸ್ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿರುವ ೨೫ನೇ ವರ್ಷದ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಿರಿಯ ವಯಸ್ಸಿನಿಂದಲೇ ಮಕ್ಕಳು ಕ್ರೀಡೆಗೆ ಆದ್ಯತೆ ನೀಡಬೇಕು. ದೇಹ ಸದೃಢವಾಗಿದ್ದರೆ ಮನಸು ಸದೃಢ ವಾಗಿರುತ್ತದೆ ಎಂದರು. ಅಪ್ರಾಪ್ತ ಬಾಲಕರು ವಾಹನ ಚಾಲನೆ ಮಾಡುವುದು ಅಪರಾಧ. ನಿಗದಿತ ವಯಸ್ಸಿನ ಬಳಿಕ ಚಾಲನಾ ಪರವಾನಗಿ ಪಡೆದು ವಾಹನ ಚಾಲನೆ ಮಾಡುವುದು ಅಗತ್ಯ. ಅದಕ್ಕಿಂತ ಮುನ್ನ ವಾಹನ ಚಾಲನೆ ಮಾಡಿದಲ್ಲಿ ದÀಂಡ ವಿಧಿಸಲಾಗುತ್ತದೆ ಎಂದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿಯ ಅಧ್ಯಕ್ಷ ಕಾಂಡAಡ ಜೋಯಪ್ಪ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ಸಲಹೆ ಸೂಚನೆಗಳನ್ನು ನೀಡಿದರು, ಈ ಸಂದರ್ಭ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿಯ ಕಾರ್ಯದರ್ಶಿ, ಮುಖ್ಯ ತರಬೇತು ದಾರರಾಗಿರುವ ಮಾಜಿ ಸೈನಿಕ ಕೇಟೋಳಿರ ಡಾಲಿ ಅಚ್ಚಪ್ಪ, ಖಜಾಂಚಿ ಮಾಚೆಟ್ಟಿರ ಕುಸು ಕುಶಾಲಪ್ಪ, ನಿರ್ದೆಶಕರಾದ ಮುಕ್ಕಾಟಿರ ವಿನಯ್, ಕುಂಚೆಟ್ಟಿರ ಸುಧಿ, ಕೊಂಡಿರ ಗಣೇಶ್, ದುಗ್ಗಳ ಸದಾನಂದ, ತರಬೇತು ದಾರರಾದ ಅರೆಯಡ ಗಣೇಶ್, ಕುಂಡ್ಯೋಳAಡ ಕವಿತಾ ಮುತ್ತಣ್ಣ, ಬಿದ್ದಾಟಂಡ ಮಮತ ಚಿಣ್ಣಪ್ಪ, ಪೋಷಕರಾದ ಅರೆಯಡ ರತ್ನಾ ಪೆಮ್ಮಯ್ಯ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.