ಸಿದ್ದಾಪುರ, ಏ. ೨೪: ವಾಯುವಿಹಾರಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಪಾಲಿಬೆಟ್ಟ ಸಮೀಪದ ಮೇಕೂರು ಹೊಸ್ಕೇರಿ ಗ್ರಾಮದ ಎಮ್ಮೆ ಗುಂಡಿ ಕಾಫಿ ತೋಟದಲ್ಲಿ ನಡೆದಿದೆ.
ಟಾಟಾ ಸಂಸ್ಥೆಯ ಎಮ್ಮೆಗುಂಡಿ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿರುವ ಚೆಲ್ಲಾದೊರೆ ಮೇಸ್ತಿç (೫೯) ಎಂಬವರು ತೋಟದ ಮನೆಯಲ್ಲಿ ವಾಸ ಮಾಡಿಕೊಂಡಿದ್ದರು. ಎಂದಿನAತೆ ಬೆಳಗ್ಗಿನ ಜಾವ ವಾಯುವಿಹಾರಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಕಾಫಿ ತೋಟಗಳಿಂದ ಮತ್ತೊಂದು ಕಾಫಿ ತೋಟಕ್ಕೆ ತೆರಳುತ್ತಿದ್ದ ಕಾಡಾನೆಗಳ ಪೈಕಿ ಕಾಡಾನೆ ಒಂದು ಚೆಲ್ಲಾ ದೊರೆ ಮೇಸ್ತಿç ಮೇಲೆ ದಾಳಿ ನಡೆಸಿದೆ.
ಇದೇ ಸಂದರ್ಭ ಅವರು ಕಿರುಚಿಕೊಂಡಾಗ ಸಮೀಪದ ಕಾರ್ಮಿಕರು ಬರುವಷ್ಟರಲ್ಲಿ ಅವರು ಪ್ರಾಣಕಳೆದುಕೊಂಡಿದ್ದಾರೆ. ಕಾಡಾನೆಯು ಚೆಲ್ಲಾ ಮೇಸ್ತಿç ಮೇಲೆ ಮನ ಬಂದAತೆ ತುಳಿದು ಸಾಯಿಸಿದೆ. ಈ ಭಾಗದಲ್ಲಿ ಹಾಗೂ ಬಾಡಗ ಬಾಣಂಗಾಲ ಗ್ರಾಮದಲ್ಲ ಮರಿಯಾನೆಗಳು ಸೇರಿದಂತೆ ೪೦ಕ್ಕೂ ಅಧಿಕ ಕಾಡಾನೆಗಳು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸುತ್ತಾಡುತ್ತಾ ದಾಂಧಲೆ ನಡೆಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕಾಫಿ ತೋಟಗಳಲ್ಲಿ
(ಮೊದಲ ಪುಟದಿಂದ) ಬೀಡುಬಿಟ್ಟಿರುವ ಕಾಡಾನೆಗಳು ಮಾನವನ ಮೇಲೆ ದಾಳಿ ನಡೆಸುತ್ತಿವೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಪಾಲಿಬೆಟ್ಟ ಸಮೀಪದ ಮೂಕ ಕಾಫಿ ತೋಟದಲ್ಲಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಆನೆ ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರು ಆತಂಕಕ್ಕೆ ಸಿಲುಕಿದ್ದಾರೆ. ಗುರುವಾರದಂದು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ಚೆಲ್ಲಾ ದೊರೆಮೇಸ್ತ್ರಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪುತ್ರನು ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪುತ್ರಿಯನ್ನು ವಿವಾಹ ಮಾಡಿಕೊಡಲಾಗಿದೆ. ಕಾಡಾನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ದುರ್ಮರಣಗೊಂಡ ಚೆಲ್ಲಾ ಮೇಸ್ತಿçಯ ಸಾವಿನ ವಿಚಾರ ತಿಳಿದು ಕುಟುಂಬಸ್ಥರು ಹಾಗೂ ಕಾರ್ಮಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಸಂಕೇತ್ ಪೂವಯ್ಯ ಭೇಟಿ
ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಚೆಲ್ಲಾ ದೊರೆ ಮೇಸ್ತಿç ಸಾವನ್ನಪ್ಪಿದ ವಿಚಾರ ತಿಳಿದು ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭ ಮಾತನಾಡಿದ ಸಂಕೇತ್ ಪೂವಯ್ಯ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣನವರಿಗೆ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಮಾಹಿತಿ ನೀಡಲಾಗಿದ್ದು ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೂಡಲೇ ಸ್ಪಂದಿಸುವAತೆ ತಿಳಿಸಿದ್ದಾರೆ ಎಂದರು.
ಅಲ್ಲದೆ ಆ ಭಾಗದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡನ್ನು ಕಾಡಿಗಟ್ಟಲು ಕಾರ್ಯಾಚರಣೆ ಇಂದಿನಿAದಲೇ ಪ್ರಾರಂಭಿಸುವAತೆ ತಿಳಿಸಿದ್ದಾರೆ ಎಂದರು. ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಚೆಲ್ಲಾದೊರೆ ಮೇಸ್ತಿç ಕುಟುಂಬಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣನವರ ಸೂಚನೆ ಮೇರೆಗೆ ತುರ್ತು ಪರಿಹಾರವಾಗಿ ಅರಣ್ಯ ಇಲಾಖೆ ವತಿಯಿಂದ ರೂ. ೫ ಲಕ್ಷದ ಚೆಕ್ ಅನ್ನು ಸಂಕೇತ್ ಪೂವಯ್ಯ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಅಲ್ಲದೆ ಉಳಿದ ಪರಿಹಾರದ ಮೊತ್ತವನ್ನು ಅತಿ ಶೀಘ್ರದಲ್ಲಿ ನೀಡುವಂತೆ ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಂಕೇತ್ ತಿಳಿಸಿದರು. ಇದೇ ಸಂದರ್ಭ ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್ ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.
ಕಾಡಾನೆಗಳ ಸೆರೆಗೆ ಒತ್ತಾಯ
ಇತ್ತೀಚಿನ ದಿನಗಳಲ್ಲಿ ಆನೆ - ಮಾನವ ಸಂಘರ್ಷ ಮತ್ತಷ್ಟು ಹೆಚ್ಚಾಗಿದ್ದು ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮೇಲೆ ಕಾಡಾನೆಗಳು ದಾಳಿ ನಡೆಸಿ ಹತ್ಯೆ ಮಾಡುತ್ತಿದೆ. ಹಲವಷ್ಟು ಮಂದಿ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಶಾಶ್ವತ ಯೋಜನೆಯನ್ನು ಸರಕಾರ ಕೈಗೊಂಡು ವನ್ಯಪ್ರಾಣಿಗಳ ಹಾವಳಿಗಳನ್ನು ತಡೆಗಟ್ಟ ಬೇಕೆಂದು ಹಾಗೂ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಅಟ್ಟಬೇಕೆಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕುಟ್ಟಂಡ ಅಜಿತ್ ಕರುಂಬಯ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕಾರ್ಮಿಕರ ಆಕ್ರೋಶ
ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮೇಲೆ ಕಾಡಾನೆಗಳು ದಾಳಿ ನಡೆಸುತ್ತಿದ್ದು ಆತಂಕದ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಚೆಲ್ಲಾ ಮೇಸ್ತಿç ಮೇಲೆ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆಯಿಂದಾಗಿ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳ ಹಾವಳಿಯಿಂದಾಗಿ ನೆಮ್ಮದಿ ಇಲ್ಲದಂತಾಗಿದೆ. ತೋಟಕ್ಕೆ ಕೆಲಸಕ್ಕೆ ತೆರಳಲು ಕೂಡ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ಶಾಶ್ವತವಾಗಿ ಯೋಜನೆಯನ್ನು ರೂಪಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ
ಕಾರ್ಮಿಕ ಚೆಲ್ಲಾ ದೊರೆ ಮೇಸ್ತಿç ಸಾವನ್ನಪ್ಪಿದ ಘಟನೆ ಸ್ಥಳಕ್ಕೆ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್. ಜಗನ್ನಾಥ್, ಎ.ಸಿ.ಎಫ್. ಗೋಪಾಲ್, ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್, ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಈ ಭಾಗದಲ್ಲಿರುವ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸುವ ಕಾರ್ಯಾಚರಣೆ ನಡೆಸಿದರು. ಮೃತ ಚೆಲ್ಲಾ ದೊರೆ ಮೇಸ್ತಿçಯ ಮರಣೋತ್ತರ ಪರೀಕ್ಷೆಯನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ನಡೆಸಲಾಯಿತು ಬಳಿಕ ಸ್ವಗೃಹಕ್ಕೆ ಮೃತದೇಹವನ್ನು ಕೊಂಡೊಯ್ಯಲಾಯಿತು. ಘಟನೆ ಸಂಬAಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. -ವರದಿ : ವಾಸು