ಕೂಡಿಗೆ, ಏ. ೨೪ ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಾಕುಮಾರಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಮೊದಲಿಗೆ ಹಿಂದಿನ ಸಭೆಯ ವರದಿಯನ್ನು ಮಂಡಿಸುವ ಸಂದರ್ಭ ಕಳೆದ ಸಾಲಿನ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳನ್ನು ಅಧಿಕಾರಿ ವರ್ಗ ಮತ್ತು ಆಡಳಿತ ಮಂಡಳಿ ಜಾರಿ ಮಾಡಿಲ್ಲ ಎಂದು ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೆಚ್.ಎಸ್. ಮಂಜುನಾಥ, ಮಹದೇವ, ನಾರಾಯಣ ಆಕ್ರೋಶ ವ್ಯಕ್ತಪಡಿಸಿದರು.
ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒತ್ತುವರಿ ಸರಕಾರಿ ಜಾಗವನ್ನು ಸರ್ವೆ ನಡೆಸಿ ಗ್ರಾಮ ಪಂಚಾಯಿತಿ ಆಸ್ತಿಯನ್ನು ಸಂರಕ್ಷಣೆ ಮಾಡಲು ಅಧಿಕಾರಿ ವರ್ಗ ಮುಂದಾಗಬೇಕೆAದು ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್.ಎಸ್. ಮಂಜುನಾಥ, ಹೆಚ್.ಸಿ. ಮಹದೇವ, ಹೆಚ್.ಎನ್. ಶಿವನಂಜಪ್ಪ, ಹೆಚ್.ಪಿ. ತನುಕುಮಾರ್ ಸೇರಿದಂತೆ ಸರ್ವ ಸದಸ್ಯರು ಒತ್ತಾಯಿಸಿದರು.
ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ಸಭೆಯ ತೀರ್ಮಾನದಂತೆ ಎಲ್ಲಾ ವಾರ್ಡ್ಗಳಲ್ಲಿ ಕ್ರಮಬದ್ಧವಾಗಿ ನಿರ್ವಹಿಸಿ ಪೂರ್ಣ ಗೊಳಿಸುವಂತೆ ಸಭೆಯಲ್ಲಿದ್ದ ಸದಸ್ಯರು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಅರುಣಾಕುಮಾರಿ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ಖರ್ಚು - ವೆಚ್ಚಗಳ ಬಗ್ಗೆ ಸುದೀರ್ಘವಾದ ಚರ್ಚೆಗಳು ನಡೆದವು.
ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಮೋಹನ್ ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳ ಬಗ್ಗೆ ಪ್ರಸ್ತಾಪಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಲತಾ, ಸದಸ್ಯರಾದ ಹೆಚ್.ಜೆ. ನಾರಾಯಣ, ಹೆಚ್.ಬಿ. ಚಂದ್ರಶೇಖರ್ ಜೋಗಿ, ರತ್ನಮ್ಮ, ಪರಮೇಶ್, ಹೆಚ್.ಕೆ. ಕವಿತ, ಕಾರ್ಯದರ್ಶಿ ಸುರೇಶ್ ಹಾಜರಿದ್ದರು.