ಕಸ್ತೂರಿ ರಂಗನ್ ಇನ್ನಿಲ್ಲ

ನವದೆಹಲಿ, ಏ. ೨೫: ಇಸ್ರೋ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟಿçÃಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿ ರಂಗನ್ (೮೪) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ತಾ. ೨೭ ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ರಾಜ್ಯಸಭೆಯ ಸದಸ್ಯರಾಗಿ (೨೦೦೩-೦೯), ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದರು.

ಇಬ್ಬರು ಉಗ್ರರ ಮನೆಗಳು ಧ್ವಂಸ

ಶ್ರೀನಗರ, ಏ. ೨೫: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಭಾಗಿಯಾದ ಲಷ್ಕರ್-ಎ-ತಯಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಉಗ್ರರ ಮನೆಗಳು ಗುರುವಾರ ಮಧ್ಯರಾತ್ರಿ ನಡೆದ ಸ್ಫೋಟದಲ್ಲಿ ಧ್ವಂಸಗೊAಡಿವೆ. ದಕ್ಷಿಣ ಕಾಶ್ಮೀರದ ಬಿಜ್ ಬೆಹೆರಾ ಮತ್ತು ತ್ರಾಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳಲ್ಲಿ ಶೋಧ ಕಾರ್ಯ ನಡೆಸಿವೆ. ಈ ವೇಳೆ ಮನೆಗಳಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸ್ಫೋಟಗೊಂಡಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿನ ಹಾಗೂ ನೆರೆಹೊರೆಯ ನಿವಾಸಿಗಳನ್ನು ಸ್ಥಳಾಂತರಿಸಲಾಯಿತು ಎಂದು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ನಿವಾಸಿ ಥೋಕರ್, ಪಹಲ್ಗಾಮ್ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದಾನೆ. ಪುಲ್ವಾಮಾ ಜಿಲ್ಲೆಯ ತ್ರಾಲ್‌ನ ನಿವಾಸಿ ಆಸಿಫ್ ಎಂಬಾತ ದಾಳಿಯ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ೨೬ ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ವಕ್ಫ್ ಕಾಯಿದೆ ಸಮರ್ಥಿಸಿಕೊಂಡ ಕೇಂದ್ರ

ನವದೆಹಲಿ, ಏ. ೨೫: ಕೇಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಸಮರ್ಥಿಸಿಕೊಂಡಿದ್ದು, ಈ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸುವಂತೆ ಕೋರಿದೆ. ಸಂಸತ್ತಿನಲ್ಲಿ ಒಪ್ಪಿತವಾಗಿ ಊರ್ಜಿತ ಆಗಿರುವ ಕಾಯ್ದೆಯ ಯಾವುದೇ ನಿಬಂಧನೆಗಳ ಮೇಲಿನ ತಡೆಯಾಜ್ಞೆಯನ್ನು ಕೇಂದ್ರ ಸರ್ಕಾರ ವಿರೋಧಿಸಿದ್ದು, ಸಾಂವಿಧಾನಿಕವಾಗಿ ರಚನೆ ಆಗಿರುವ ನ್ಯಾಯಾಲಯಗಳು ಶಾಸನಬದ್ಧ ನಿಬಂಧನೆಗೆ ನೇರವಾಗಿ ಅಥವಾ ಪರೋಕ್ಷವಾಗಿ ತಡೆ ನೀಡುವುದಿಲ್ಲ ಎಂಬುದು ಕಾನೂನಿನಲ್ಲಿ ಸ್ಥಿರವಾದ ನಿಲುವು ಇದೆ ಎಂದು ಕೇಂದ್ರ ಹೇಳಿದೆ. ವಕ್ಫ್ ಕಾನೂನಿನ ಇತ್ತೀಚಿನ ತಿದ್ದುಪಡಿಗಳನ್ನು ಸಮರ್ಥಿಸಿಕೊಂಡ ಕೇಂದ್ರವು, ಧಾರ್ಮಿಕ ಮತ್ತು ಆಸ್ತಿ ಹಕ್ಕುಗಳಿಗೆ ಸಂಬAಧಿಸಿದ ಕಾನೂನು ಸವಾಲುಗಳನ್ನು ಪರಿಶೀಲಿಸುತ್ತಿರುವಾಗ ಅದರ ನಿಬಂಧನೆಗಳಿಗೆ ಯಾವುದೇ ಮಧ್ಯಂತರ ವಿರಾಮ ವಿಧಿಸಬಾರದು ಎಂದು ಸುಪ್ರೀಂಕೋರ್ಟ್ ಅನ್ನು ಒತ್ತಾಯಿಸಿದೆ.

ಜನಿವಾರ ತೆಗೆಸಿದ ಪ್ರಕರಣ - ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಬೆಂಗಳೂರು, ಏ. ೨೫: ಇತ್ತೀಚೆಗೆ ರಾಜ್ಯಾದ್ಯಂತ ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದ ವಿಪ್ರ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದಕ್ಕೆ ಸಂಬAಧಿಸಿದAತೆ, ಇದು ಧಾರ್ಮಿಕ ಸ್ವಾತಂತ್ರ‍್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಶುಕ್ರವಾರ ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗಕ್ಕೆ ಔಪಚಾರಿಕ ದೂರು ದಾಖಲಿಸಿದ್ದಾರೆ. ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿದ್ದೇನೆ. ನಾಗರಿಕರ ಸಂವಿಧಾನದತ್ತ ಹಕ್ಕುಗಳು ಹಾಗೂ ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉಗ್ರ ದಾಳಿ ಸಮರ್ಥಿಸಿಕೊಂಡ ವ್ಯಕ್ತಿ ಬಂಧನ

ಮAಗಳೂರು, ಏ. ೨೫: ಪಹಲ್ಗಾಮ್ ಉಗ್ರ ದಾಳಿಯನ್ನು ಸಮರ್ಥಿಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ನಿಚ್ಚು ಮಂಗಳೂರು ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಉಳ್ಳಾಲ ತಾಲೂಕಿನ ಉಳ್ಳಾಲತ್ತಿ ನಿವಾಸಿ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಯ ಕುರಿತು ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ಪೋಸ್ಟ್ನಲ್ಲಿ ಒಳಗೊಂಡಿತ್ತು. ದೂರುದಾರರು ಪೋಸ್ಟ್ನ ಸ್ಕಿçÃನ್‌ಶಾಟ್‌ಗಳನ್ನು ಮತ್ತು ಬಳಕೆದಾರರ ಪ್ರೊಫೈಲ್ ಅನ್ನು ಸಾಕ್ಷö್ಯಕ್ಕಾಗಿ ಸಲ್ಲಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ - ನೋಟೀಸ್ ನೀಡಲು ಕೋರ್ಟ್ ನಿರಾಕರಣೆ

ನವದೆಹಲಿ, ಏ. ೨೫: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹಣ ಅಕ್ರಮ ವರ್ಗಾವಣೆಗೆ ಸಂಬAಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರಿಗೆ ನೋಟೀಸ್ ನೀಡಲು ದೆಹಲಿ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ. ತಾ. ೯ ರಂದು ಇ.ಡಿ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಪರಿಶೀಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗನೆ, ಹೊಸ ಕಾನೂನು ನಿಬಂಧನೆಗಳ ಅಡಿಯಲ್ಲಿ, ಆರೋಪಿಗಳಿಗೆ ಮೊದಲು ವಿಚಾರಣೆಗೆ ಅವಕಾಶ ನೀಡದೆ ನ್ಯಾಯಾಲಯವು ಅವರ ವಿರುದ್ಧದ ದೂರನ್ನು ಔಪಚಾರಿಕವಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂದಿತು. ಈ ಪ್ರಕರಣದಲ್ಲಿ ಯಾವುದೇ ವಿಳಂಬವನ್ನು ಬಯಸುವುದಿಲ್ಲ ಮತ್ತು ತ್ವರಿತವಾಗಿ ಆರೋಪಿಗಳಿಗೆ ನೋಟೀಸ್ ಜಾರಿ ಮಾಡಬೇಕೆಂದು ಇ.ಡಿ ನ್ಯಾಯಾಲಯಕ್ಕೆ ತಿಳಿಸಿತು. ಆದಾಗ್ಯೂ, ಮೊದಲು ನೋಟೀಸ್ ನೀಡುವುದು ಅಗತ್ಯ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಕೊಡಬೇಕು. ಅದರ ನಂತರವೇ ನ್ಯಾಯಾಲಯವು ಕಾನೂನುಬದ್ಧವಾಗಿ ಅಂತಹ ಆದೇಶವನ್ನು ನೀಡಬಹುದೆಂದು ನ್ಯಾಯಾಧೀಶರು ತಿಳಿಸಿದರು.

ಮೇಧಾ ಪಾಟ್ಕರ್ ಬಂಧನ - ಬಿಡುಗಡೆ

ನವದೆಹಲಿ, ಏ. ೨೫: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ೨೩ ವರ್ಷಗಳ ಹಿಂದಿನ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಪೊಲೀಸರು ಬಂಧಿಸಿದರು. ಆದರೆ, ಮೇಧಾ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಮಧ್ಯಾಹ್ನ ಅಮಾನತ್ತಿನಲ್ಲಿರಿಸಿತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರು, ೨೫,೦೦೦ ವೈಯಕ್ತಿಕ ಬಾಂಡ್ ಆಧಾರದ ಮೇಲೆ ಮೇಧಾ ಅವರ ಬಿಡುಗಡೆಗೆ ಆದೇಶಿಸಿ, ವಿಚಾರಣೆಯನ್ನು ಮೇ ೨೦ಕ್ಕೆ ಮುಂದೂಡಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ದಾಖಲಿಸಿದ್ದ ೨೩ ವರ್ಷಗಳ ಹಿಂದಿನ ಮಾನನಷ್ಟ ಪ್ರಕರಣಕ್ಕೆ ಸಂಬAಧಿಸಿದAತೆ ನರ್ಮದಾ ಬಚಾವೋ ಆಂದೋಲನ ನಾಯಕಿ ಮೇಧಾ ಪಾಟ್ಕರ್ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ದೆಹಲಿ ಪೊಲೀಸರು ಶುಕ್ರವಾರ ಅವರನ್ನು ಬಂಧಿಸಿದ್ದರು. ವಿ.ಕೆ. ಸಕ್ಸೇನಾ ಅವರು ರಾಷ್ಟಿçÃಯ ನಾಗರಿಕ ಸ್ವಾತಂತ್ರö್ಯ ಮಂಡಳಿಯ ನೇತೃತ್ವ ವಹಿಸಿದ್ದಾಗ ಮೇಧಾ ಪಾಟ್ಕರ್ ಅವರು ನವೆಂಬರ್ ೨೪, ೨೦೦೦ ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಕೇಸು ಇದಾಗಿದೆ.