ಮಡಿಕೇರಿ, ಏ. ೨೫ : ನಗರದ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮ ಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ ಮತ್ತು ಕಲಶಾಭಿಷೇಕ ಪೂಜೆಗಳು ನಡೆದವು. ಮಧ್ಯಾಹ್ನ ೧ ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಸದಸ್ಯರುಗಳಾದ ಕುಶಾಲಪ್ಪ, ಜಿ. ರಾಜೇಂದ್ರ, ವಿಶಾಲ್, ನಂದಕುಮಾರ್ ಹಾಗೂ ಸಂತೋಷ್ ಭಟ್ ಹಾಜರಿದ್ದರು.