ಮಡಿಕೇರಿ, ಏ. ೨೬: ಪ್ರಾದೇಶಿಕ ಅಸಮತೋಲನ ಬಗ್ಗೆ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತ ಅಧಿಕಾರ ಸಮಿತಿ ಸದಸ್ಯ ಎಂ.ಹೆಚ್. ಸೂರ್ಯನಾರಾಯಣ ಅವರು ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳ ಜತೆ ಸುದೀರ್ಘ ಚರ್ಚೆ ನಡೆಸಿದರು.
ನಗರದ ಜಿ.ಪಂ. ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ಸಂಬAಧಿಸಿದAತೆ ಮಾಹಿತಿ ಪಡೆದರು.
ನಂಜುAಡಪ್ಪ ವರದಿಯಂತೆ ರಾಜ್ಯದಲ್ಲಿ ಹಿಂದಿನ ಬಾಂಬೆ ಪ್ರೆಸಿಡೆನ್ಸಿ, ಹೈದರಾಬಾದ್ ಕರ್ನಾಟಕ, ಕೊಡಗು ಮತ್ತು ಹಳೇ ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿದ ಜಿಲ್ಲೆಗಳು ವಿಭಿನ್ನತೆಯಿಂದ ಕೂಡಿವೆ. ಈ ಪ್ರದೇಶದಲ್ಲೂ ಅಂತರ್ ಜಿಲ್ಲಾ ಅಸಮತೋಲನತೆ ಇವೆ ಎಂದು ವರದಿ ನೀಡಿದ್ದು, ಸಮಿತಿಯು ಅಂತಹ ಅಸಮತೋಲನೆ ಹಾಗೂ ವಿಶೇಷವಾಗಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ನಡುವಿನ ಅಸಮಾನತೆ ನಿವಾರಣೆ ಮಾಡಬೇಕಿದೆ ಎಂದರು.
ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅಂತರ್ ಜಿಲ್ಲಾ ಮತ್ತು ಅಂತರ ಪ್ರಾದೇಶಿಕ ಅಸಮಾನತೆಗಳನ್ನು ಕಡಿಮೆ ಮಾಡಲು ಇತರೆ ಜಿಲ್ಲೆಗಳಿಗಿಂತ ಹಿಂದುಳಿದಿರುವ ಜಿಲ್ಲೆಗಳು/ಪ್ರದೇಶಗಳ ಅಭಿವೃದ್ಧಿಗೆ ಸೂಕ್ತ ಕಾರ್ಯತಂತ್ರವನ್ನು ಸೂಚಿಸುವಂತೆ ನಂಜುAಡಪ್ಪ ಸಮಿತಿಯಲ್ಲಿ ತಿಳಿಸಲಾಗಿದೆ ಎಂದರು.
ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಪ್ರಾದೇಶಿಕ ಅಸಮತೋಲನ ನಿವಾರಣೆ ಸಂಬAಧಿಸಿದAತೆ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ, ತೋಟಗಾರಿಕೆ, ವ್ಯಾಪಾರ ವಾಣಿಜ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಮುನ್ನಡೆಯಬೇಕಿದೆ. ಆ ನಿಟ್ಟಿನಲ್ಲಿ ಅಭಿವೃದ್ಧಿಗೆ ಪೂರಕವಾಗಿ ಮಾಹಿತಿ ನೀಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಘವ ಅವರು ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಹೇಳಿದರು.
ಆರ್.ಸಿ.ಹೆಚ್. ಅಧಿಕಾರಿ ಡಾ. ಮಧುಸೂದನ್ ಮಾತನಾಡಿ, ಹಾಡಿಗಳು ಹಾಗೂ ಲೈನ್ಮನೆಗಳಲ್ಲಿ ಆರೋಗ್ಯಕ್ಕೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು.
ರೋಟರಿ ಸಂಸ್ಥೆಯ ನಿರ್ದೇಶಕ ಎಚ್.ಟಿ. ಅನಿಲ್ ಮಾತನಾಡಿ, ಕಳೆದ ೨ ವರ್ಷಗಳಲ್ಲಿ ಕೊಡಗಿಗೆ ೧ ಲಕ್ಷಕ್ಕೂ ಅಧಿಕ ಕಾರ್ಮಿಕರು ಹೊರ ರಾಜ್ಯಗಳಿಂದ ಬಂದಿದ್ದಾರೆ. ಈ ಪ್ರಮಾಣ ಮುಂದೊAದು ದಿನ ಕೊಡಗಿಗೇ ಸಮಸ್ಯೆ ತರುವ ಎಲ್ಲಾ ಸಾಧ್ಯತೆಗಳಿದೆ. ಸ್ಥಳೀಯ ಕಾರ್ಮಿಕರಿಗೆ ಜಿಲ್ಲೆಯಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಉದ್ಯಮಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ಮಾಡಿದರು.
ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಮಾತನಾಡಿ, ಕೊಡಗು ಜಿಲ್ಲೆ ಕಾಫಿ ಮತ್ತು ಪ್ರವಾಸೋದ್ಯಮಕ್ಕೆ ಹೆಸರಾಗಿದ್ದು, ಇದರ ಜೊತೆಗೆ ಗಾರ್ಮೆಂಟ್ಸ್ ಸೇರಿದಂತೆ ವಿವಿಧ ಉದ್ಯಮಗಳನ್ನು ತೆರೆಯುವಂತಾಗಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾಹಿತಿ ನೀಡಿ, ವರ್ಷದಿಂದ ವರ್ಷಕ್ಕೆ ಭತ್ತ ಬೆಳೆಯುವ ಪ್ರದೇಶ ಕಡಿಮೆಯಾಗಿದೆ. ಆದ್ದರಿಂದ ಭತ್ತ ಬೆಳೆಯುವವರಿಗೆ ಪ್ರೋತ್ಸಾಹಧನ (ಇನ್ಸೆಂಟಿವ್) ನೀಡುವಂತಾಗಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ಮಾತನಾಡಿ, ಸಾಧನೆಗೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಪ್ರತ್ಯೇಕವಾಗಿ ಮುಖ್ಯೋಪಾಧ್ಯಾಯರನ್ನು ನೇಮಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ, ರಾಜ್ಯದಲ್ಲಿ ಏಕರೂಪ ಶಿಕ್ಷಣ ಪದ್ಧತಿ ಜಾರಿಯಾಗಬೇಕು. ಪ್ರತೀ ಶಾಲೆಯಲ್ಲಿ ವಸತಿ ಸಹಿತ ಶಾಲೆ ಆರಂಭಿಸಬೇಕು ಎಂದು ಸಲಹೆ ಮಾಡಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ದಿಲನ್ ಮುತ್ತಣ್ಣ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಸತಿ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿದ್ದು, ವಸತಿ ಶಾಲೆಗಳ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಮಾತನಾಡಿ, ಹಾಡಿ ಜನರು ವಾಸಿಸುವ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಅಂಗನವಾಡಿ ನಿರ್ಮಾಣಕ್ಕೆ ಅವಕಾಶ ಮಾಡುವಂತಾಗಬೇಕು ಎಂದರು.
ತಿತಿಮತಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಮಂಗಳ ಮಾತನಾಡಿ, ಶಾಲೆಯಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಆಧಾರ್ ಕಾರ್ಡ್ ಇಲ್ಲದೆ ತೊಂದರೆಯಾಗಿದೆ ಎಂದರು. ಹೊಟೇಲ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ಉಪಾಧ್ಯಕ್ಷ ಮಂಜುನಾಥ್ ಮಾತನಾಡಿ, ಆಡಳಿತದಲ್ಲಿ ವಿಕೇಂದ್ರೀಕರಣ ಇದ್ದಾಗ ಪ್ರಗತಿ ಸಾಧಿಸಲು ಸಾಧ್ಯ ಎಂದರು.
ಜಿ.ಪಂ. ಉಪಕಾರ್ಯದರ್ಶಿ ಅಬ್ದುಲ್ ನಬಿ, ಜಿ.ಪಂ. ಯೋಜನಾ ನಿರ್ದೇಶಕ ಜೀವನ್ಕುಮಾರ್, ಬಿಸಿಎಂ ಇಲಾಖೆ ಅಧಿಕಾರಿ ಪಿ.ಪಿ. ಕವಿತಾ, ವಿಕಲಚೇತನರ ಅಧಿಕಾರಿ ವಿಮಲ, ನವೀನ್, ಪವನ್ ಕುಮಾರ್, ಇತರರು ಇದ್ದರು.