ಕುಶಾಲನಗರ, ಏ. ೨೭: ದಲಿತ ಸಾಹಿತ್ಯ ಪರಿಷತ್ತು, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ, ಕೊಡಗು ವಿಶ್ವವಿದ್ಯಾಲಯ ಹಾಗೂ ಅಹಿಂದ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಚಿಕ್ಕಅಳುವಾರದಲ್ಲಿರುವ ಕೊಡಗು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದಲ್ಲಿ ರಾಷ್ಟಿçÃಯ ವಿಚಾರ ಸಂಕಿರಣ ತಾ. ೨೮ ರಂದು (ಇಂದು) ನಡೆಯಲಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೊಡಗು ವಿಶ್ವವಿದ್ಯಾಲಯ ಉಪಕುಲಪತಿ ಡಾ. ಅಶೋಕ ಸಂಗಪ್ಪ ಆಲೂರ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ. ಎ.ಬಿ. ರಾಮಚಂದ್ರಪ್ಪ ಹಾಗೂ ವಿಶ್ವವಿದ್ಯಾಲಯ ಕುಲಸಚಿವ ಡಾ. ಎಂ. ಸುರೇಶ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಾಹಿತಿ ಅರ್ಜುನ್ ಮೌರ್ಯ ರಚಿಸಿರುವ ಬೆಂದೊಡಲ ಕುಣಿತ ಎಂಬ ಕೃತಿಯನ್ನು ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಬಿಡುಗಡೆಗೊಳಿಸಲಿದ್ದಾರೆ.

ಬೆಳಿಗ್ಗೆ ೧೧ ಗಂಟೆಗೆ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ವಿಷಯದಲ್ಲಿ ನಡೆಯುವ ಸಂಕಿರಣದಲ್ಲಿ ಎಲ್.ಎನ್. ಮುಕುಂದರಾಜ್ ವಿಷಯ ಮಂಡಿಸಲಿದ್ದಾರೆ. ಕೊಡಗಿನಲ್ಲಿ ಅಹಿಂದ ಹೋರಾಟದ ನೆಲೆಗಟ್ಟುಗಳು ಎಂಬ ವಿಷಯವನ್ನು ಅಹಿಂದ ಒಕ್ಕೂಟದ ಪ್ರಮುಖ ಟಿ.ಪಿ. ರಮೇಶ್ ಮಂಡಿಸಲಿದ್ದಾರೆ. ಚಾಮರಾಜನಗರ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ.ಆರ್. ಗಂಗಾಧರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ವಿ.ಪಿ. ಶಶಿಧರ್ ಸಮಾರೋಪ ಭಾಷಣ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವೀರಾಜಪೇಟೆ ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ, ದಲಿತ ಸಂಘಟನೆ ಪ್ರಮುಖ ಜಯಪ್ಪ ಹಾನಗಲ್ ಪಾಲ್ಗೊಳ್ಳಲಿದ್ದಾರೆ.