ವೀರಾಜಪೇಟೆ, ಏ. ೨೬: ಸರಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಕ್ಷೇತ್ರದ ಶಾಸಕರ ಕಚೇರಿಯ ಸಭಾಂಗಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಪಿ.ವಿ. ಜಾನ್ಸನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಅನ್ನಭಾಗ್ಯ ಯೋಜನೆ ಸರಕಾರ ಉಚಿತವಾಗಿ ನೀಡಿದರೂ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಂದ ರೂ. ೨೦ನ್ನು ಪಡೆದುಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಆಹಾರ ನಿರೀಕ್ಷಕರಿಗೆ ದೂರು ನೀಡಲಾಗಿತ್ತು. ಇದುವರೆಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು ಪಡಿತರರಿಗೆ ಉಚಿತ ಅಕ್ಕಿ ವಿತರಣೆ ಎಂದು ನ್ಯಾಯಬೆಲೆ ಅಂಗಡಿಗಳಲ್ಲಿ ನಾಮಫಲಕ ಹಾಕುವಂತೆ ತೀರ್ಮಾನಿಸಲಾಯಿತು.
ಈಗಾಗಲೇ ತಾಲೂಕು ಆಹಾರ ಇಲಾಖೆ ೨೫,೯೨೨ ಫಲಾನುಭವಿಗಳಿಗೆ ನೂತನ ಪಡಿತರ ಚೀಟಿ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದರು. ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನಲ್ಲಿ ಗೃಹಲಕ್ಷಿö್ಮ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ತಲುಪುತ್ತಿರುವ ಬಗ್ಗೆ ಮತ್ತು ಶಕ್ತಿ ಯೋಜನೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಯೋಜನೆಯನ್ನು ವಯಸ್ಕ ಮಹಿಳಾ ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿನಿಯರು, ಹೆಣ್ಣುಮಕ್ಕಳು ಈ ಪ್ರಯೋಜನವನ್ನು ಪಡೆದುಕೊಂಡಿರುತ್ತಾರೆ ಎಂದು ಜಾನ್ಸನ್ ಹೇಳಿದರು.
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶಿಲನಾ ಸಭೆಯಲ್ಲಿ ಯೋಜನೆಯ ಕಾರ್ಯದರ್ಶಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ಸಮಾಜ ಕಲ್ಯಾಣಾಧಿಕಾರಿ ತಂಗಮ್ಮ, ತಾ.ಪಂ.ಯ ಸತೀಶ್ ಕುಮಾರ್ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು.