ಮದೆನಾಡು, ಏ. ೨೭: ಮಂಗಳೂರು ರಾಷ್ಟಿçÃಯ ಹೆದ್ದಾರಿಯ ಮದೆನಾಡಿನ ಎರಡನೇ ಮೊಣ್ಣಂಗೇರಿ ಬಳಿ ನಿನ್ನೆ ರಾತ್ರಿ ಕೊಕಾಕೋಲ ತುಂಬಿದ ಲಾರಿಯೊಂದು ರಸ್ತೆ ಬದಿಯ ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ನಡೆದಿದೆ.

ಲಾರಿಯು ಬಿಡದಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಲಾರಿ ಚಾಲಕ ರೇಣುಕಪ್ಪ ಎಂಬಾತ ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.