ಮಡಿಕೇರಿ, ಏ. ೨೬ : ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ಘಟಕದ ಉಪಾಧ್ಯಕ್ಷರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಕರ್ನಾಟಕದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ನೇಮಕ ಮಾಡಿದ್ದಾರೆ.
ಭಾಸ್ಕರ್ ರಾವ್ ಅವರು ಈ ಹಿಂದೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಆನಂತರ ಎಡಿಜಿಪಿಯಾಗಿ ಸ್ವಯಂ ನಿವೃತ್ತಿ ಪಡೆದಿದ್ದರು.