ಸೋಮವಾರಪೇಟೆ, ಏ. ೨೬: ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಆಯೋಜಿಸಿರುವ ವಿಶ್ವ ಲಸಿಕಾ ವಾರದ ಕಾರ್ಯಕ್ರಮವನ್ನು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಜಮೀರ್ ಅಹಮ್ಮದ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಲಸಿಕೆಯು ಮಕ್ಕಳನ್ನು ೩೦ ಮಾರಕ ರೋಗಗಳಿಂದ ರಕ್ಷಿಸಲ್ಪಡುತ್ತದೆ. ಲಸಿಕೆ ನೀಡುತ್ತಿರುವುದರಿಂದ ೧೯೭೪ ರಿಂದಲೂ ಪ್ರತಿ ನಿಮಿಷಕ್ಕೆ ಆರು ಮಕ್ಕಳನ್ನು ರಕ್ಷಿಸಲಾಗುತ್ತಿದೆ. ೨೦೨೩ ರ ವರದಿಯ ಪ್ರಕಾರ ಪ್ರಪಂಚದಾದ್ಯAತ ೨೨ ಮಿಲಿಯನ್ ಮಕ್ಕಳು ಮೊದಲ ದಡಾರ ಲಸಿಕೆಯಿಂದ ವಂಚಿತರಾಗಿದ್ದಾರೆ. ತಾ. ೨೪ ರಿಂದ ೩೦ ರವರೆಗೆ ವಿಶ್ವ ಲಸಿಕಾ ವಾರವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮಾತನಾಡಿ, ತಾ. ೨೪ ರಿಂದ ೩೦ ರವರೆಗೆ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಉಚಿತ ವಿಶೇಷ ಲಸಿಕೆಯನ್ನು ಹಾಕಲಾಗುತ್ತಿದೆ. ಪೋಷಕರು ಹೆಚ್ಚಿನ ಆಸಕ್ತಿ ವಹಿಸಿ ಸ್ವಯಂ ಪ್ರೇರಿತರಾಗಿ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಿ ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ವಸಂತಿ, ವಿಶ್ವಜ್ಞ, ರಾಧಿಕಾ, ಅನಿತಾ ಇದ್ದರು.