ಕೂಡಿಗೆ, ಏ. ೨೬: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ಅಧ್ಯಕ್ಷೆ ಲತಾಬಾಯಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ ಪ್ರಮುಖವಾಗಿ ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳನ್ನು ತುರ್ತಾಗಿ ಆರಂಭಿಸಿ, ಕ್ರಿಯಾಯೋಜನೆಗೆ ಅನುಗುಣವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಚರ್ಚೆಗಳನ್ನು ಹಾಜರಿದ್ದ ಸದಸ್ಯರು ಚರ್ಚಿಸಿದರು. ನಂತರ ಗ್ರಾಮ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ, ಬೀದಿದೀಪಗಳ ಅಳವಡಿಕೆ ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ವಿಷಯ ಪ್ರಸ್ತಾವನೆಗಳು ನಡೆದವು.

ಅಧ್ಯಕ್ಷೆ ಲತಾಬಾಯಿ ಮಾತನಾಡಿ, ಸದಸ್ಯರ ಅಭಿಪ್ರಾಯವನ್ನು ಸಂಗ್ರಹಿಸಿ ಆದ್ಯತೆಯ ಅನುಗುಣವಾಗಿ ಗ್ರಾಮದ ಎಲ್ಲಾ ವಾರ್ಡ್ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಬೇಸಿಗೆ ಕಾಲಕ್ಕೆ ಅನುಗುಣವಾಗಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಗೆ ಎಲ್ಲಾ ಹಂತಗಳಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾಗುವುದು. ಅಭಿವೃದ್ಧಿ ಪೂರಕವಾದ ಕ್ರಿಯಾ ಯೋಜನೆ ಯನ್ನು ತಯಾರಿಸಿ ಅದರ ಮುಖೇನ ಕಾರ್ಯ ಗತಗೊಳಿಸಲಾಗುವುದು ಎಂದರು. ಅಭಿವೃದ್ಧಿ ಅಧಿಕಾರಿ ಬಿ.ಆರ್. ಹೇಮಲತಾ ಅವರು ಸಾರ್ವಜನಿಕರ ಅರ್ಜಿಗಳ ಬಗ್ಗೆ ತಿಳಿಸಿದರು. ನಂತರ ಸರ್ಕಾರದ ಹೊಸ ಯೋಜನೆಗಳ ಮಾಹಿತಿಯನ್ನು ಸಭೆಗೆ ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಬಸವರಾಜ್, ಸದಸ್ಯರುಗಳಾದ ಭಾಗೀರಥಿ, ಸವಿತಾ, ಲಕ್ಷಿö್ಮ, ಎಂ.ಎನ್. ಧರ್ಮಪ್ಪ, ಅಭಿವೃದ್ಧಿ ಅಧಿಕಾರಿ ಹೇಮಲತಾ, ಕಾರ್ಯದರ್ಶಿ ಕೆ.ಸಿ. ರವಿ ಹಾಜರಿದ್ದರು. ರವಿ ಸ್ವಾಗತಿಸಿ, ವಂದಿಸಿದರು.