ಮಡಿಕೇರಿ, ಏ. ೨೭: ಕಾಂಗ್ರೆಸ್ನ ಹಿರಿಯ ನಾಯಕ ದಿ. ಮಿಟ್ಟು ಚಂಗಪ್ಪ ಅವರ ಮನೆಗೆ ಗೃಹ ಸಚಿವÀ ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಭೇಟಿನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮಾಜಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಮಿಟ್ಟು ಚಂಗಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.