ಜನಿವಾರ, ಮಂಗಳಸೂತ್ರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ

ಬೆಂಗಳೂರು, ಏ. ೨೮ : ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆAಡೆAಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿAದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣವೇ, ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು.ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆAಡೆAಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಎಂದು ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ.

ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ

ಬೆಳಗಾವಿ, ಏ. ೨೮ : ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಸಿಎಂ ಕೈ ಎತ್ತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್ ಪ್ರತಿಭಟನಾ ಸಭೆ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದರು. ಇದ್ದಕ್ಕಿದ್ದಂತೆ ತನ್ನ ಮುಂಭಾಗವೇ ಪ್ರತಿಭಟನೆ ನೋಡಿ ಸಿಎಂ ಒಂದು ಕ್ಷಣ ಭಾಷಣ ಮಾಡುವುದನ್ನು ನಿಲ್ಲಿಸಿದರು. ನಿಲ್ಲಿಸಿದ ಬಳಿಕ ಯಾರದು ಎಸ್‌ಪಿ ಎಂದು ಕೇಳಿ ವೇದಿಕೆಗೆ ಬರುವಂತೆ ಹೇಳಿದರು. ಹೆಚ್ಚುವರಿ ಎಸ್‌ಪಿ ಬರುತ್ತಿದ್ದಂತೆ ಏನ್ರೀ ಇದು, ಏನು ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿ ಕೈ ಎತ್ತಿ ಸಿಟ್ಟು ಹೊರಹಾಕಿದ್ದಾರೆ. ನಂತರ ಗೊಂದಲ ಸೃಷ್ಟಿಸುತ್ತಿರುವ ಜನರನ್ನು ಹೊರಹಾಕುವಂತೆ ಅವರಿಗೆ ಸೂಚಿಸುವ ವೀಡಿಯೋ ಎಲ್ಲಡೆ ವೈರಲ್ ಆಗಿದೆ.

ಅಪಘಾತ : ಐವರ ಸಾವು

ಕಾಣಿಪಾಕಂ, ಏ. ೨೮: ಸಮೀಪದ ತೋತಾಪಲ್ಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿAದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿರುಪತಿ: ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಕಾಣಿಪಾಕಂ ಸಮೀಪದ ತೋತಾಪಲ್ಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿAದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.