ಸಿದ್ದಾಪುರ, ಏ. ೨೮: ನಿವೇಶನ ರಹಿತರ ಹೋರಾಟ ಸಮಿತಿ ವತಿಯಿಂದ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ವಹಿಸಿದ ನಿವೇಶನ ರಹಿತರ ಹೋರಾಟ ಸಮಿತಿಯ ಪ್ರಮುಖ ಹಾಗೂ ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಹಿಂದೆ ಗುರುತಿಸಿದ್ದ ಜಾಗದಲ್ಲಿ ಬಡವರಿಗೆ ನಿವೇಶನವನ್ನು ಹಂಚಿಕೆ ಮಾಡಬೇಕೆಂದು ಆಗ್ರಹಿಸಿದರು. ನಿವೇಶನ ರಹಿತರಿಗೆ ನಿವೇಶನ ಒದಗಿಸಿ ಕೊಡಬೇಕಾದ ಗ್ರಾಮ ಪಂಚಾಯಿತಿಯು ನಿರ್ಲಕ್ಷö್ಯ ವಹಿಸುತ್ತಿದೆ ಎಂದು ಆರೋಪಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ. ರಮೇಶ್ ಮಾತನಾಡಿದರು. ಪ್ರತಿಭಟನೆಯಲ್ಲಿ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಜಯರಾಮ್. ಕಮಲ. ಅಂಥೋಣಿ. ವೀರಮಣಿ. ಯಶೋಧ ಶಾರದ ಸುಜಾತ ಸರಸ್ವತಿ ಇನ್ನಿತರರು ಹಾಜರಿದ್ದರು.