ಕುಶಾಲನಗರ, ಏ. ೨೮: ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಮಡಿಕೇರಿ ಕ್ಷೇತ್ರ ಶಾಸಕರಾದ ಡಾ. ಮಂತರ್ ಗೌಡ ಕರೆ ನೀಡಿದ್ದಾರೆ.
ಅವರು ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ‘ಕಲಾರಂಭ್’ ಸಾಂಸ್ಕೃತಿಕ ವೇದಿಕೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ತಮ್ಮ ಪ್ರತಿಭೆಯನ್ನು ಹೊರಗೆ ಹಾಕುವ ಮನಸ್ಥಿತಿ ಹೊಂದಿರಬೇಕು. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಕಾರ್ಯಕ್ರಮಗಳ ವೇದಿಕೆಯ ಬಳಕೆ ಮಾಡಿಕೊಳ್ಳುವ ಮೂಲಕ ಧನಾತ್ಮಕ ಚಿಂತನೆ ಹೊಂದಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಎನ್.ಎನ್. ಶಂಭುಲಿAಗಪ್ಪ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಎಂಜಿಎA ಪದವಿ ಕಾಲೇಜಿನ ಪ್ರಾಂಶುಪಾಲರಾದ ಟಿ.ಎ. ಲಿಖಿತ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪದವಿ ತರಗತಿಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಶಾಸಕರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ, ಕಾಲೇಜಿನ ಆಡಳಿತ ಅಧಿಕಾರಿ ಮಹೇಶ್ ಅಮೀನ್, ನಂಜಪ್ಪ, ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕರಾದ ಮೋನಿಷಾ ಕಾಲೇಜು ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಜೀವನ್ ಹಾಜರಿದ್ದರು.