ಕೂಡಿಗೆ, ಏ. ೨೮: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಹಿಂದಿನ ಮಾಸಿಕ ಸಭೆಯ ವರದಿಯನ್ನು ಮಂಡಿಸುವ ಸಂದರ್ಭ ಇನ್ನೂ ಅನೇಕ ಕಾಮಗಾರಿಗಳನ್ನು ಕೈಗೊಳ್ಳದ ಬಗ್ಗೆ ಚರ್ಚೆಗಳು ನಡೆದವು. ನಂತರ ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ೧೦ ಅಂಗನವಾಡಿಗಳಿಗೂ ಸೋಲಾರ್ ವಿದ್ಯುತ್ ಸಂಪರ್ಕ ನೀಡುವ ಬಗ್ಗೆ ಪ್ರಸ್ತಾಪಗೊಂಡು ಇದಕ್ಕೆ ಎಲ್ಲಾ ಸದಸ್ಯರು ಒಪ್ಪಿಗೆ ಸೂಚಿಸಿದರು. ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚು ಗಮನ ಹರಿಸಲಾಗುವುದು ಎಂದರು.
ಅಭಿವೃದ್ಧಿ ಅಧಿಕಾರಿ ಸಂತೋಷ್ ಸರಕಾರದ ಹೊಸ ಯೋಜನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷೆ ಶಶಿಕಲಾ, ಸದಸ್ಯರು ಉಪಸ್ಥಿತರಿದ್ದರು.