ಸುಂಟಿಕೊಪ್ಪ, ಏ. ೨೮: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಆಡಳಿತ ಸಭೆಯನ್ನು ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಇತ್ತೀಚೆಗೆ ನಡೆದ ಸಭೆಯಲ್ಲಿ ರೋಮನ್ ಕ್ಯಾಥೋಲಿಕ್ನ ಜಗದ್ಗುರು ಪೋಪ್ ಪ್ರಾನ್ಸಿಸ್ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸುವ ಮೂಲಕ ಸಂತಾಪ ಸೂಚಿಸಲಾಯಿತು.
ಮೇ ೯, ೧೦ ಮತ್ತು ೧೧ ರಂದು ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರಿಗೆ ಥ್ರೋಬಾಲ್, ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಕ್ರೀಡಾಕೂಟವನ್ನು ಸುಂಟಿಕೊಪ್ಪದ ಜಿಯಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ. ೩ ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟವನ್ನು ಸಂಘದ ಸದಸ್ಯರು ಸಹಭಾಗಿತ್ವ ವಹಿಸಿಕೊಳ್ಳುವುದರೊಂದಿಗೆ ಯಶಸ್ವಿಗೊಳಿಸಲು ಪಣತೊಡಬೇಕೆಂದು ಸಂಘದ ಅಧ್ಯಕ್ಷರು ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಗೌರವ ಅಧ್ಯಕ್ಷ ಜೋಕಿಂವಾಸ್, ಜೋಕಿಂ ರಾಡ್ರಿಗಸ್, ಪ್ರಧಾನ ಕಾರ್ಯದರ್ಶಿ ಜೂಡಿವಾಸ್, ಖಜಾಂಜಿ ಜೇಮ್ಸ್ ಡಿಸೋಜ, ಕ್ರೀಡಾ ಕಾರ್ಯದರ್ಶಿ ಪ್ರಭು, ಸಂಘಟನಾ ಕಾರ್ಯದರ್ಶಿಗಳಾದ ಅಂತೋಣಿ ಡಿಸೋಜ, ಮರ್ವಿನ್ ಲೋಬೋ, ಪಿಲಿಫ್ವಾಸ್, ಪಿ.ಎಫ್. ಸಬಾಸ್ಟೀನ್, ರೋಸ್ಮೇರಿ ರಾಡ್ರಿಗಸ್, ಗ್ರೇಸಿ ವೀರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ರಾಬಿನ್, ಮಡಿಕೇರಿ ತಾಲೂಕು ಅಧ್ಯಕ್ಷ ಸಬಾಸ್ಟೀನ್, ಕುಶಾಲನಗರ ತಾಲೂಕು ಅಧ್ಯಕ್ಷ ಪೀಠರ್, ಯುವ ಘಟಕದ ಅಧ್ಯಕ್ಷ ಪ್ರಶಾಂತ್ ಮತ್ತಿತರರು ಇದ್ದರು.