ವೀರಾಜಪೇಟೆ, ಏ. ೨೮: ವೀರಾಜಪೇಟೆಯ ಮಗ್ಗುಲ ದಲ್ಲಿರುವ ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದೇಶದ ನಾಗರಿಕರಿಗೆ ಸಂತಾಪ ಸೂಚಿಸಲಾಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಡಾ. ಸುನೀಲ್ ಮುದ್ದಯ್ಯ ಮಾತನಾಡಿ, ಉಗ್ರವಾದವನ್ನು ಮೆಟ್ಟಿ ನಿಲ್ಲುವ ಕೆಲಸವಾಗಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಹಾಗೂ ವಿದ್ಯಾರ್ಥಿಗಳ ಪರವಾಗಿ ಡಾ. ಅನಸ್ವರ ಮಾತನಾಡಿ ಸಂತಾಪ ಸೂಚಿಸಿದರು. ಕಾರ್ಯಕ್ರಮಲ್ಲಿ ಉಪ ಪ್ರಾಂಶುಪಾಲ, ಆಡಳಿತ ಕಚೇರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.