ಕುಶಾಲನಗರ, ಏ. ೨೮: ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ ಇತಿಹಾಸ ಅರಿಯದವನು ಬದುಕಲಿರುವ ಹಕ್ಕನ್ನು ಕಳೆದುಕೊಳ್ಳುತ್ತಾನೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯ ಪಟ್ಟಿದ್ದಾರೆ.

ಇಂದು ಕುಶಾಲನಗರ ಸಮೀಪದ ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದ ರಾಷ್ಟಿçÃಯ ವಿಚಾರ ಸಂಕಿರಣದಲ್ಲಿ ಸಾಹಿತಿ ಅರ್ಜುನ್ ಮೌರ್ಯ ಅವರ ಬೆಂದೊಡಲ ಕುಣಿತ ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ ಎಂದು ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದರು. ಶಿಕ್ಷಣ ಎಂಬುದು ಶೋಷಣೆಯನ್ನು ಪ್ರಶ್ನಿಸಲು ಕಲಿಸುತ್ತದೆ ಎಂದರು.

ಚಾಮರಾಜನಗರ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎ.ಆರ್.ಗಂಗಾಧರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಾಹಿತ್ಯವು ಸಮಾಜವನ್ನು ಒಡೆಯುವಂತಾಗಬಾರದು ಸಾಹಿತ್ಯ ಮನುಷ್ಯನನ್ನು ಒಂದುಗೂಡಿಸÀಬೇಕು.

ಕೊಡಗು ವಿಶ್ವವಿದ್ಯಾಲಯ ಉಪಕುಲಪತಿ ಡಾ. ಅಶೋಕ್ ಸಂಗಪ್ಪ ಆಲೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಭಿವೃದ್ಧಿ ಎಂಬುದು ಶಿಕ್ಷಣದಿಂದ ಮಾತ್ರ ಸಾಧ್ಯ ಮೌಲ್ಯಯುತ ಶಿಕ್ಷಣವೇ ಇಂದಿನ ಅಗತ್ಯ ಎಂದರು. ಪ್ರಮುಖರಾದ ವಿ.ಪಿ.ಶಶಿಧರ್ ಸಮಾರೋಪ ಭಾಷಣ ಮಾಡಿ ಮಾನವ ಪ್ರೀತಿ ಮತ್ತು ಮಾನವ ಐಕ್ಯತೆಗೆ ಸಾಹಿತ್ಯಗಳು ನೆರವಾಗಿವೆ. ಸಾಹಿತ್ಯಗಳು ನಮ್ಮನ್ನು ಉತ್ತಮ ಸಮಾಜದೆಡೆಗೆ ಕೈಹಿಡಿದು ನಡೆಸಿಕೊಂಡು ಹೋಗುತ್ತವೆ ಎಂದರು.

ಹರೀಶ್ ಮಾಗಲು ಅವರ ಪರಿವರ್ತನಾ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊAಡಿತು. ಅರ್ಜುನ್ ಮೌರ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಹೇಮಂತ್, ಡಾ. ಝಮೀರ್ ಅಹಮದ್ ಹಾಗೂ ಪಿ.ಕೆ.ಅಬ್ದುಲ್ ರೆಹಮಾನ್ ನಿರೂಪಿಸಿದರು. ಪ್ರತಿಮಾ ರೈ ವಂದಿಸಿದರು.