ಕೂಡಿಗೆ, ಏ. ೨೯: ಜಿಲ್ಲಾ ಅಕ್ಷರ ದಾಸೋಹ ಯೋಜನೆಯ ಸೋಮವಾರಪೇಟೆ ತಾಲೂಕಿನ ಸಹಾಯಕ ನಿರ್ದೇಶಕ ಹುದ್ದೆಯಿಂದ ಶಿಕ್ಷಣಾಧಿಕಾರಿ ಹುದ್ದೆಗೆ ಮುಂಬಡ್ತಿ ಪಡೆದÀ ಹೆಚ್. ಕಾಳನಾಯಕ್ ಅವರಿಗೆ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಶಾಲೆಯ ವತಿಯಿಂದ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಸನ್ಮಾನಿಸಿ ಬೀಳ್ಕೊಟ್ಟರು.
ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿದರು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಹೆಚ್.ಜಿ. ಕುಮಾರ್, ಅಕ್ಷರ ದಾಸೋಹದ ಮಡಿಕೇರಿ ತಾಲೂಕಿನ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಎಸ್.ಡಿ.ಎಂ.ಸಿ. ಸಲಹಾ ಸಮಿತಿಯ ಸದಸ್ಯರಾದ ಕೆ.ಎಸ್. ರಾಜಾಚಾರಿ, ಶೃತಿ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ. ಸೌಮ್ಯ, ಕಚೇರಿ ಸಿಬ್ಬಂದಿ ಎಂ. ಉಷಾ ಹಾಗೂ ಅಡುಗೆ ಸಿಬ್ಬಂದಿ ಮಂಜುಳಾ ಮತ್ತು ವಿದ್ಯಾರ್ಥಿಗಳು ಇದ್ದರು.