ಕಣಿವೆ, ಏ. ೨೯: ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಯಿತು.
ಕುಶಾಲನಗರದ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬಳಿಯಿಂದ ಆಶಾ ಕಾರ್ಯಕರ್ತೆಯರು ಘೋಷಣೆಗಳನ್ನು ಕೂಗುವ ಮೂಲಕ ಜನಜಾಗೃತಿ ಮೂಡಿಸಿದರು. ಜಾಥಾವನ್ನು ಉದ್ಘಾಟಿಸಿದ ತಾಲೂಕು ಆರೋಗ್ಯ ಅಧಿಕಾರಿ ಡಾ. ಇಂದೂಧರ್ ಮಾತನಾಡಿ, ಸಾರ್ವಜನಿಕರಲ್ಲಿ ಆರೋಗ್ಯದ ಕುರಿತು ಅರಿವು ಮೂಡಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಇಲಾಖೆಯ ಗುರಿಯಾಗಿದೆ ಎಂದರು. ಈ ಸಂದರ್ಭ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ, ಹಿರಿಯ ಆರೋಗ್ಯ ನಿರೀಕ್ಷಕ ವಿಶ್ವಜ್ಞಾ, ಅಶ್ವಿನಿ, ಮಹೇಶ್, ರಮ್ಯಾ, ಡಿಇಒ ಕವಿತಾ ಪಾಲ್ಗೊಂಡಿದ್ದರು. ಆಸ್ಪತ್ರೆ ಆವರಣದಿಂದ ಹೊರಟ ಜಾಥಾ ಪಟ್ಟಣದ ವಿವಿಧ ರಸ್ತೆಗಳ ಮೂಲಕ ಸಂಚರಿಸಿ ಜನಜಾಗೃತಿ ಮೂಡಿಸಿತು.