ಸಿದ್ದಾಪುರ, ಏ. ೨೯: ಗುರುವಾರದಂದು ತಡರಾತ್ರಿ ಸಮಯದಲ್ಲಿ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಅವರೇಗುಂದ ನಿವಾಸಿ ಕೃಷಿಕ ಸುಳ್ಯಕೋಡಿ ಚಿಣ್ಣಪ್ಪ ಅವರು ಕಾಡಾನೆ ದಾಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದರು.

ಈ ಸಂದರ್ಭದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ಸೂಚನೆಯ ಮೇರೆಗೆ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಸರ್ಕಾರದ ವತಿಯಿಂದ ಪರಿಹಾರವನ್ನು ಕೊಡಿಸುವ ಭರವಸೆಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೃತಪಟ್ಟ ಚಿಣ್ಣಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ತುರ್ತು ಪರಿಹಾರವಾಗಿ ರೂ. ೫ ಲಕ್ಷದ ಚೆಕ್‌ಅನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಡಿ.ಸಿ.ಎಫ್. ಭಾಸ್ಕರ್ ಮತ್ತು ಎ.ಸಿ.ಎಫ್. ಗೋಪಾಲ್ ಮಾರ್ಗದರ್ಶನದಲ್ಲಿ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಹಂಸ ಹಾಗೂ ಸಿಬ್ಬಂದಿ ಹಾಜರಿದ್ದರು.