ನಾಪೋಕ್ಲು, ಏ. ೨೯: ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ತಾಲೂಕಿನ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬುಲೆಟ್ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಹಳೆ ತಾಲೂಕು ನಿವಾಸಿ ಅಶ್ರಫ್(೨೬) ಎಂಬವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಅಶ್ರಫ್ ತನ್ನ ಊರಿಗೆ ತೆರಳಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಿಕ್ಸಿ ರಿಪೇರಿ ಕೆಲಸ ಮಾಡುತ್ತಿದ್ದ ಅಶ್ರಫ್ ಮೂಲತಃ ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಪಾತೂರು ಸಮೀಪದ ಬದಿಮೂಲೆ ಎಂಬಲ್ಲಿನ ನಿವಾಸಿ ಮೊಯ್ದಿನ್ ಕುಂಞ ಎಂಬವರ ಪುತ್ರ. ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. - ದುಗ್ಗಳ