ಕುಶಾಲನಗರ, ಏ. ೨೯: ಕಾಶ್ಮೀರದಲ್ಲಿ ನಡೆದ ಅಮಾನವೀಯ ಘಟನೆಯನ್ನು ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರಮುಖರು ಖಂಡಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಈ ಸಂಬAಧ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಒಕ್ಕೂಟದ ಅಧ್ಯಕ್ಷರಾದ ಎಂ.ಕೆ. ದಿನೇಶ್, ದುಷ್ಕರ್ಮಿಗಳು ನಾಗರಿಕರ ಮೇಲೆ ಏಕಾಏಕಿ ದಾಳಿ ಮಾಡಿ ಹಲವು ಪ್ರವಾಸಿಗರನ್ನು ಹತ್ಯೆ ಮಾಡಿರೋದು ಮಾನವ ಕುಲಕ್ಕೆ ಅಪಮಾನ ಮಾಡಿದಂತಾಗಿದೆ.
ಇದನ್ನು ದೇಶದ ಪ್ರತಿಯೊಬ್ಬರು ಖಂಡಿಸಬೇಕಾಗಿದೆ. ಉಗ್ರರ ನಾಶಕ್ಕೆ ಕೇಂದ್ರ ಹಾಗೂ ಸಂಬAಧಿತ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ. ಸರ್ಕಾರಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಇಡೀ ದೇಶದ ಪ್ರಜೆಗಳು ಒಮ್ಮತದಿಂದ ಒಗ್ಗಟ್ಟಾಗಿ ಬೆಂಬಲಿಸಬೇಕು ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸುವುದು ನಮ್ಮೆಲ್ಲರ ಪಾಲಿನ ಹೊಣೆಯಾಗಿದೆ ಎಂದರು.
ಈ ಸಂದರ್ಭ ಮಾತನಾಡಿದ ಪ್ರಮುಖರಾದ ಬಿ ಅಮೃತರಾಜ್ ಇಂದು ಕಾಶ್ಮೀರದಲ್ಲಿ ನಡೆದ ಕೃತ್ಯ ಮುಂದಿನ ದಿನಗಳಲ್ಲಿ ದೇಶದ ಎಲ್ಲೆಡೆ ಸಂಭವಿಸುವ ಆತಂಕ ಎದುರಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಮತ್ತು ನೆರೆಯ ಬೈಲುಕುಪ್ಪೆ ಟಿಬೆಟಿಯನ್ ಶಿಬಿರ ಗಳಲ್ಲಿ ಪಾಕ್ ,ಬಾಂಗ್ಲಾದೇಶಗಳ ಪ್ರಜೆಗಳು ಅಕ್ರಮವಾಗಿ ನುಸುಳಿರುವ ಸಾಧ್ಯತೆ ಇದ್ದು ಈ ಬಗ್ಗೆ ಸಂಬAಧಿಸಿದ ಇಲಾಖೆಗಳು ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅವರು ಮನವಿ ಮಾಡಿದರು. ಅವರುಗಳನ್ನು ತಕ್ಷಣ ದೇಶದಿಂದ ಗಡಿಪಾರು ಮಾಡುವ ಕೆಲಸ ನಡೆಯಬೇಕಾಗಿದೆ ಎಂದರು. ಗೋಷ್ಠಿಯಲ್ಲಿ ಒಕ್ಕೂಟದ ಪ್ರಮುಖರಾದ ವಿ ಡಿ ಪುಂಡರಿಕಾಕ್ಷ ಇದ್ದರು.