ಮಡಿಕೇರಿ, ಏ.೨೯ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಪ್ರತಿಮ ೨೦೧೯ನೇ ಬ್ಯಾಚಿನ ಅವಿರತ ೨೦೨೫ ಘಟಿಕೋತ್ಸವ ಸಮಾರಂಭವು ತಾ. ೩೦ ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಕ್ಯಾಂಪಸ್‌ನಲ್ಲಿ ನಡೆಯಲಿದೆ.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಭಗವಾನ್ ಬಿ.ಸಿ.ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಭಾರತೀಯ ಸಾರ್ವಜನಿಕ ಆರೋಗ್ಯ ಸಂಸ್ಥೆಯ ಅಧ್ಯಕ್ಷ ಡಾ.ಸಂಜಯ್ ಜೋಡ್‌ಪೇ ಘಟಿಕೋತ್ಸವದಲ್ಲಿ ಪ್ರಮಾಣಪತ್ರ ವಿತರಿಸಲಿದ್ದಾರೆ.

ಮಂಗಳೂರು ಕಸ್ತೂರುಬಾ ಮೆಡಿಕಲ್ ಕಾಲೇಜಿನ ಡೀನ್ ಡಾ.ಬಿ.ಉಣ್ಣಿಕೃಷ್ಣನ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಲೋಕೇಶ್ ಎ.ಜೆ., ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಕೆ.ಎಂ.ರೋಹಿಣಿ, ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷರಾದ ಡಾ.ಸೋಮಶೇಖರ್ ಇತರರು ಪಾಲ್ಗೊಳ್ಳಲಿದ್ದಾರೆ.