ಮಡಿಕೇರಿ, ಏ.೨೯ : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ ೫ ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬAಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-೨೦೨೫ ಸಂಬAಧ ಮಾಸ್ಟರ್ ತರಬೇತಿದಾರರಿಗೆ ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಎಚ್.ಎನ್. ನಾಗಮೋಹನ್‌ದಾಸ್ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬAಧ ಮಾಸ್ಟರ್ ಟ್ರೆöÊನರ್‌ಗಳು ಪರಿಶಿಷ್ಟ ಜಾತಿಯ ಕುಟುಂಬಗಳು ಹೇಳುವ ಮಾಹಿತಿ ಮೊಬೈಲ್ ಆ್ಯಪ್ ಮೂಲಕ ಭರ್ತಿ ಮಾಡಬೇಕು. ಈ ಸಂಬAಧ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ಕಾರ್ಯನಿರ್ವಹಿಸಲಿದೆ.
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಸರ್ಕಾರದ ಅತಿಮುಖ್ಯ ಕಾರ್ಯದಲ್ಲಿ ಒಂದಾಗಿದೆ. ಪರಿಶಿಷ್ಟ ಜಾತಿಯಲ್ಲಿನ ಯಾವುದೇ ಕುಟುಂಬಗಳು ಬಿಟ್ಟು ಹೋಗದಂತೆ ಸಮೀಕ್ಷೆ ಮಾಡುವುದು ಅತಿ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸಮೀಕ್ಷೆಗೆ ನಿಯೋಜಿಸಿರುವ ಸಿಬ್ಬಂದಿಗಳು ವೈಜ್ಞಾನಿಕ ಮತ್ತು ವಸ್ತುನಿಷ್ಠವಾಗಿ ಸಮೀಕ್ಷೆ ಮಾಡಬೇಕು. ಸಂಶಯಗಳಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ನಡೆಸಬೇಕು ಎಂದು ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮಾತನಾಡಿ, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ವರ್ಗೀಕರಣ ಸಂಬAಧ ಸಮೀಕ್ಷೆ ಕೈಗೊಳ್ಳಲಾಗಿದ್ದು, ಮೊಬೈಲ್ ಆ್ಯಪ್ ಆಧಾರ್‌ದಲ್ಲಿ ಮನೆ ಮನೆ ಸಮೀಕ್ಷೆ ಮಾಡಬೇಕಿದೆ. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದ್ದು, ಯಾವುದೇ ರೀತಿಯ ಸಂಶಯ ಇಲ್ಲದಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕೈಗೊಳ್ಳುವಂತೆ ಸಲಹೆ ಮಾಡಿದರು.
ಜಿಲ್ಲೆಯ ೫೪೪ ಪೋಲಿಂಗ್ ಸ್ಟೇಷನ್ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ತಾಲ್ಲೂಕು ಸಂಪನ್ಮೂಲ ತರಬೇತಿ ಅಧಿಕಾರಿಗಳು ಸಮೀಕ್ಷೆ ಮಾಡುವವರಿಗೆ ಸರಿಯಾದ ಮಾಹಿತಿ ನೀಡುವಂತಾಗಬೇಕು ಎಂದು ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ, ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬAಧ ಸಮಗ್ರ ಸಮೀಕ್ಷೆ ಕೈಗೊಂಡು ದತ್ತಾಂಶ ಸಂಗ್ರಹಿಸಬೇಕಿದೆ ಎಂದರು.
ಮೇ ೫ ರಿಂದ ೧೭ ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಹಾಗೆಯೇ ಮೇ ೧೯ ರಿಂದ ೨೧ ರವರೆಗೆ ಸಮೀಕ್ಷೆ ಬ್ಲಾಕ್‌ಗಳಲ್ಲಿ ವಿಶೇಷ ಶಿಬಿರ ಕೈಗೊಂಡು ಮನೆ ಮನೆ ಭೇಟಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿಗಳ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು.
ಪರಿಶಿಷ್ಟ ಜಾತಿ ಮುಖಂಡರ ಜೊತೆ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಏಪ್ರಿಲ್ ೨೯ ರಂದು ಸಭೆ ನಡೆಯಲಿದ್ದು, ಪರಿಶಿಷ್ಟ ಜಾತಿಗಳ ಸಮಾಜದವರು ಸ್ವಯಂಪ್ರೇರಣೆಯಿAದ ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ.
ಮಡಿಕೇರಿ ತಾಲೂಕಿಗೆ ಸಂಬAಧಿಸಿದAತೆ ತಾಲೂಕು ಪಂಚಾಯತ್ ವ್ಯಾಪ್ತಿಯ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ (ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ), ಸೋಮವಾರಪೇಟೆಯ ಅಂಬೇಡ್ಕರ್ ಭವನ, ವೀÁಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿಗೆ ಸಂಬAಧಿಸಿದAತೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ, ಈ ತಾಲೂಕುಗಳಲ್ಲಿ ಬೆಳಿಗ್ಗೆ ೧೧ ಹಾಗೂ ಕುಶಾಲನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಧ್ಯಾಹ್ನ ೩ ಗಂಟೆಗೆ ತಹಶೀಲ್ದಾರರ ನೇತೃತ್ವದಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ಶೇಖರ್ ತಿಳಿಸಿದರು.
ಮೇ ೨ ರಂದು ಗಣತಿದಾರರ ಹಂತದಲ್ಲಿ ತರಬೇತಿ ನಡೆಯಲಿದೆ. ತರಬೇತಿಗೆ ನಿಯೋಜನೆಗೆ ಆಗಿರುವ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಪರಿಶಿಷ್ಟ ಜಾತಿಯಲ್ಲಿನ ಮೂಲ ಜಾತಿಯನ್ನು ಸಮೀಕ್ಷೆ ಮಾಡುವುದು ಅತೀ ಮುಖ್ಯವಾಗಿದೆ ಎಂದು ನುಡಿದರು.
ಮಾಸ್ಟರ್ ತರಬೇತಿದಾರರಾದ ಪ್ರಶಾಂತ್ ಮಾತನಾಡಿ, ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮಾಹಿತಿ ತುಂಬುವ ವಿಧಾನ, ಜಾತಿ, ಮೂಲ ಜಾತಿ/ಉಪ ಜಾತಿ, ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ ಸಂಖ್ಯೆ, ಕುಟುಂಬದ ಮುಖ್ಯಸ್ಥರ ಮತ್ತು ಸದಸ್ಯರ ಹೆಸರು, ಲಿಂಗ, ವಯಸ್ಸು, ಆಧಾರ್ ಕಾರ್ಡ್ ಸಂಖ್ಯೆ, ಶಿಕ್ಷಣ/ ವಿಧ್ಯಾಭ್ಯಾಸ, ವೃತ್ತಿ, ಕುಟುಂಬದ ಕುಲಕಸುಬು, ಆಸ್ತಿವಿವರ, ಕೃಷಿ, ಕುಟುಂಬದ ಆದಾಯ, ಉದ್ಯೋಗ, ಹೀಗೆ ಹಲವು ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್‌ನಲ್ಲಿ ತುಂಬಬೇಕಿದೆ ಎಂದು ಮಾಹಿತಿ ನೀಡಿದರು.