ಕೂಡಿಗೆ, ಏ. ೨೯: ಕೂಡಿಗೆ ಗ್ರಾಮ ಪಂಚಾಯತಿ ಯಲ್ಲಿರುವ ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಯಿತು.
ಶಿಬಿರಕ್ಕೆ ಚಾಲನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗರೀಶ್ ನೀಡಿದರು. ನಂತರ ಮಾತನಾಡಿ ಮಕ್ಕಳ ಕಲಿಕೆಗೆ ಪೂರಕವಾದ ಅಂಶಗಳು ಅರಿವು, ಕ್ರೀಡೆಯ ಜೊತೆಯಲ್ಲಿ ಚಿತ್ರ ಕಲೆಯನ್ನು ಮಕ್ಕಳು ಕಲಿಯುವುದರಿಂದ ಜ್ಞಾನ ವಿಕಸನವಾಗುವುದು ಎಂದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಮಂಜುಳಾ, ಕಾರ್ಯದರ್ಶಿ ಪುನೀತ್, ಗ್ರಂಥಾಲಯ ಮೇಲ್ವಿಚಾರಕಿ ಕವಿತಾ ಸೇರಿದಂತೆ ಮಕ್ಕಳು ಹಾಜರಿದ್ದರು.