‘ಸಶಸ್ತç ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ‍್ಯ': ಮೋದಿ ಹೇಳಿಕೆ

ನವದೆಹಲಿ, ಏ. ೨೯: ಏಪ್ರಿಲ್ ೨೨ ರಂದು ನಡೆದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಮಟ್ಟದ ಭದ್ರತಾ ಸಭೆಗಳನ್ನು ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಸೇನೆಗಳ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟಿçÃಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಭೆ ನಡೆಸಿದರು. ಪಾಕ್ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದ ಬಳಿಕ ಮುಂದಿನ ಕಾರ್ಯತಂತ್ರಕ್ಕಾಗಿ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ. ಉನ್ನತಮಟ್ಟದ ಸಭೆಯಲ್ಲಿ, ಭಯೋತ್ಪಾದನೆಗೆ ಹೀನಾಯ ಹೊಡೆತ ನೀಡುವುದು ರಾಷ್ಟಿçÃಯ ಸಂಕಲ್ಪ ಎಂದು ಮೋದಿ ದೃಢಪಡಿಸಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತç ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ‍್ಯ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

೧೮ ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವಂತೆ ರಾಜ್ಯಪಾಲರ ಸಲಹೆ

ಬೆಂಗಳೂರು, ಏ. ೨೯: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿದ್ದು, ವಿಧಾನಸಭೆಯ ೧೮ ಬಿಜೆಪಿ ಸದಸ್ಯರ (ಶಾಸಕರು) ಅಮಾನತು ರದ್ದುಗೊಳಿಸುವ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಮತ್ತು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಮತ್ತು ಸ್ಪೀಕರ್‌ಗೆ ಬರೆದ ಪ್ರತ್ಯೇಕ ಪತ್ರಗಳಲ್ಲಿ, ರಾಜ್ಯದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಮೂಲ ತತ್ವಗಳನ್ನು ಎತ್ತಿಹಿಡಿಯಲು ಮತ್ತು ಅಮಾನತುಗೊಂಡ ಶಾಸಕರು ಮತ್ತೆ ಜನ ಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಅನುವು ಮಾಡಿಕೊಡುವಂತಹ ನಿರ್ಧಾರ ತೆಗೆದುಕೊಳ್ಳಬೇಕೆಂಬ ಆಸೆಯನ್ನು ರಾಜ್ಯಪಾಲರು ವ್ಯಕ್ತಪಡಿಸಿದ್ದಾರೆ. ರಾಜ್ಯ ಪಕ್ಷದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದ ಬಿಜೆಪಿ ನಿಯೋಗ ಸೋಮವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಅಮಾನತು ರದ್ದುಗೊಳಿಸುವಂತೆ ಕೋರಿ ಜ್ಞಾಪಕ ಪತ್ರವನ್ನು ಸಲ್ಲಿಸಿತ್ತು.

ಮೊಬೈಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಏಳು ಜನರ ಬಂಧನ

ಚಿಕ್ಕಬಳ್ಳಾಪುರ, ಏ. ೨೯: ಚಿಕ್ಕಬಳ್ಳಾಪುರ ಸಿಇಎನ್ (ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ) ಪೊಲೀಸರು ಹರಿಯಾಣ ಮತ್ತು ರಾಜಸ್ಥಾನದ ಮೇವಾತ್ ಪ್ರದೇಶದ ನಿವಾಸಿಗಳಾದ ಏಳು ಮಂದಿಯನ್ನು ಬಂಧಿಸುವ ಮೂಲಕ ಪ್ರಮುಖ ಮೊಬೈಲ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ನವೆಂಬರ್ ೨೨, ೨೦೨೪ ರಂದು ಸೇಫ್ ಸೀಡ್ ಕ್ಯಾರಿಯರ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಪದ್ಮನಾಬ್ ಪೆರೇಸಂದ್ರ ಅವರು ಮೊಬೈಲ್ ಕಳ್ಳತನದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೆಹಲಿಯ ನೋಯ್ಡಾದಿಂದ ಹೋಲ್ ಸೇಲ್ ಡೀಲರ್‌ಗಳಿಗೆ ಸಾಗಿಸಲಾಗಿದ್ದ ಸುಮಾರು ಮೂರು ಕೋಟಿ ರೂ. ಮೌಲ್ಯದ ರೆಡ್‌ಮಿ ಮೊಬೈಲ್‌ಗಳ ೧೭೦ ಬಾಕ್ಸ್ಗಳು (ಒಟ್ಟು ೩೪೦೦ ಮೊಬೈಲ್ ಫೋನ್‌ಗಳು) ಮತ್ತು ೧೬೩ ಬಾಕ್ಸ್ಗಳ ಪೊಕೊ ಮೊಬೈಲ್(ಒಟ್ಟು ೩೨೬೦ ಮೊಬೈಲ್‌ಗಳು)ಗಳನ್ನು ಹೊತ್ತ ಟ್ರಕ್‌ವೊಂದು ರಾಷ್ಟಿçÃಯ ಹೆದ್ದಾರಿ-೪೪ರ ಮೂಲಕ ಬೆಂಗಳೂರಿಗೆ ಬರುತ್ತಿತ್ತು. ಇದರಲ್ಲಿದ್ದ ಎಲ್ಲಾ ಮೊಬೈಲ್ ಗಳನ್ನು ಕಳ್ಳತನ ಮಾಡಲಾಗಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿಯ ಡಾಬಾವೊಂದರ ಬಳಿ ಖಾಲಿ ಕಂಟೇನರ್ ಪತ್ತೆಯಾಗಿದೆ. ಈ ಸಂಬAಧ ಪೆರೆಸಂದ್ರದಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ಪೆಕ್ಟರ್ ನಯಾಜ್ ಬೇಗ್ ನೇತೃತ್ವದ ಪೊಲೀಸ್ ತಂಡವು ಪ್ರಮುಖ ಆರೋಪಿ, ವಾಹನ ಚಾಲಕ ರಾಹುಲ್ ಹಾಗೂ ಇತರ ಆರೋಪಿಗಳಾದ ಇಮ್ರಾನ್, ಮೊಹಮ್ಮದ್ ಮುಸ್ತಫಾ, ಅನೂಪ್ ರಾಯ್, ಅಭಿಜಿತ್ ಪೌಲ್, ಸಕೃಲ್ಲಾ ಹಾಗೂ ಯೂಸುಫ್ ಖಾನ್ ಎಂಬವನನ್ನು ಬಂಧಿಸಿದೆ ಎಂದು ಕುಶಾಲ್ ಚೌಕ್ಸೆ ತಿಳಿಸಿದ್ದಾರೆ.

ಗುಂಪು ಹಲ್ಲೆಗೆ ಯುವಕ ಬಲಿ, ೧೫ ಜನರ ಬಂಧನ

ಮAಗಳೂರು, ಏ. ೨೯: ಮಂಗಳೂರು ನಗರದ ಹೊರವಲಯದ ಕುಡುಪು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಜಗಳ ನಡೆದಿದ್ದು, ೨೫ಕ್ಕೂ ಹೆಚ್ಚು ಜನರ ಗುಂಪೊAದು ಯುವಕನನ್ನು ಥಳಿಸಿ ಕೊಲೆ ಮಾಡಿದೆ. ಏಪ್ರಿಲ್ ೨೭ ರಂದು ಮಧ್ಯಾಹ್ನ ೩ ಗಂಟೆ ಸುಮಾರಿಗೆ ಭಟ್ರ ಕಲ್ಲುರ್ಟಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಹತ್ಯೆಯಾದ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ, ಆತನ ಮೇಲೆ ಕೋಲುಗಳಿಂದ ಹಲ್ಲೆ ನಡೆಸಲಾಗಿದೆ ಎಂದರು. ದೇವಾಲಯದ ಮೈದಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಆರಂಭದಲ್ಲಿ, ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು. ಏಪ್ರಿಲ್ ೨೮ ರಂದು ನಡೆದ ಮರಣೋತ್ತರ ಪರೀಕ್ಷೆಯಲ್ಲಿ ಯುವಕನ ಬೆನ್ನಿನ ಮೇಲೆ ಬಲವಾದ ಹೊಡೆತದ ಗಾಯಗಳಾಗಿದ್ದು, ರಕ್ತಸ್ರಾವ, ಆಘಾತ ಮತ್ತು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಯುವಕ ಮೃತಪಟ್ಟಿದ್ದಾನೆ ಎಂದು ದೃಢಪಟ್ಟಿದೆ. ಮಂಗಳೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಇಲ್ಲಿಯವರೆಗೆ ೧೫ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಕನಿಷ್ಟ ಇನ್ನೂ ೧೦ ಜನರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕುಡುಪು ನಿವಾಸಿ ಸಚಿನ್ ಎಂದು ಗುರುತಿಸಲಾದ ಪ್ರಮುಖ ಆರೋಪಿ ಈಗಾಗಲೇ ನಮ್ಮ ವಶದಲ್ಲಿದ್ದಾನೆ ಎಂದು ತಿಳಿಸಿದರು.