ವೀರಾಜಪೇಟೆ, ಏ. ೩೦ : ಕಾಶ್ಮೀರದ ಪೆಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ನಡೆದ ಗುಂಡಿನ ಧಾಳಿಯನ್ನು ಖಂಡಿಸಿ ಹಿಂದೂ ಮಲಯಾಳಿ ಸಮುದಾಯ ದವರು ಮತ್ತು ಸಂಘಟನೆಗಳಿAದ ಮೊಂಬತ್ತಿ ಪ್ರತಿಭಟನೆ ನಡೆಯಿತು.
ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ, ಹಿಂದೂ ಮಲಯಾಳಿ ಅಸೋಸಿಯೇಷನ್, ಹಿಂದೂ ಮಲಯಾಳಿ ಅಸೋಸಿಯೇಷನ್, ಮಹಿಳಾ ಘಟಕ ವೀರಾಜಪೇಟೆ ಮತ್ತು ಎಸ್.ಎನ್.ಡಿ.ಪಿ ವೀರಾಜಪೇಟೆ ಶಾಖೆಯ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಮೊಂಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿ.ಜಿ. ಸುಮೇಶ್ ಉಗ್ರರ ವಿರುದ್ಧ ಹೋರಾಡಲು ಭಾರತ ಪ್ರಧಾನಮಂತ್ರಿಗಳು ಮತ್ತು ಸೇನೆಗಳಿಗೆ ನಾವು ಸಂಪೂರ್ಣ ಬೆಂಬಲ ಸೂಚಿಸುತ್ತೇನೆ ಎಂದು ಹೇಳಿದರು.
ಹಿಂದೂ ಮಲಯಾಳಿ ಅಸೋಸಿಯೇಷನ್ ವೀರಾಜಪೇಟೆ ಅಧ್ಯಕ್ಷರಾದ ಎ. ವಿನೂಪ್ ಕುಮಾರ್ ಮಾತನಾಡಿ ಉಗ್ರರು ಅಮಾಯಕ ಪ್ರವಾಸಿಗರ ಮೇಲೆ ನಡೆಸಿರುವ ಕೃತ್ಯ ಖಂಡನೀಯ. ಇದಕ್ಕೆ ತಕ್ಕ ಉತ್ತರ ನೀಡುವಂತಾಗಬೇಕು ಎಂದರು.
ಹಿAದೂ ಮಲಯಾಳಿ ಅಸೋಸಿಯೇಷನ್ನ ಮಹಿಳಾ ಘಟಕದ ಅಧ್ಯಕ್ಷೆ ಶೀಭಾ ಪ್ರಥ್ವಿನಾಥ್ ಮಾತನಾಡಿ ಪೆಹಲ್ಗಾಂನಲ್ಲಿ ನಡೆದಿರುವ ಘಟನೆಯನ್ನು ಖಂಡಿಸುತ್ತೇವೆ ಎಂದರು.
ಪ್ರತಿಭಟನೆಯಲ್ಲಿ ಎಸ್.ಎನ್.ಡಿ.ಪಿ. ವೀರಾಜಪೇಟೆ ಶಾಖೆಯ ಅಧ್ಯಕ್ಷ ಟಿ.ಎನ್. ನಾರಾಯಣ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಹಾಜರಿದ್ದರು.