ಮಡಿಕೇರಿ, ಮೇ ೨ : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗೌಡ ಜನಾಂಗದ ಲೆದರ್ಬಾಲ್ ಕ್ರಿಕೆಟ್ ಪಂದ್ಯಾವಳಿ (ಜಿಪಿಎಲ್)ಯ ಅಂತಿಮ ಪಂದ್ಯಾವಳಿ ತಾ. ೪ರಂದು ನಡೆಯಲಿದೆ. ಕ್ರೀಡಾಕೂಟದ ಅಂಗವಾಗಿ ತಾ. ೩ರಂದು (ಇಂದು) ಮಹಿಳೆಯರ ಟೆನಿಸ್ಬಾಲ್ ಕ್ರಿಕೆಟ್ ಹಾಗೂ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯೊAದಿಗೆ ಮೋಟಾರ್ ಮಡಿಕೇರಿ, ಮೇ ೨ : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗೌಡ ಜನಾಂಗದ ಲೆದರ್ಬಾಲ್ ಕ್ರಿಕೆಟ್ ಪಂದ್ಯಾವಳಿ (ಜಿಪಿಎಲ್)ಯ ಅಂತಿಮ ಪಂದ್ಯಾವಳಿ ತಾ. ೪ರಂದು ನಡೆಯಲಿದೆ. ಕ್ರೀಡಾಕೂಟದ ಅಂಗವಾಗಿ ತಾ. ೩ರಂದು (ಇಂದು) ಮಹಿಳೆಯರ ಟೆನಿಸ್ಬಾಲ್ ಕ್ರಿಕೆಟ್ ಹಾಗೂ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯೊAದಿಗೆ ಮೋಟಾರ್ ದಂಬೆಕೋಡಿ ೧೦ ರನ್ ಗಳಿಸುವುದರೊಂದಿಗೆ ಮೂರು ವಿಕೆಟ್ ಕಬಳಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದು ಕೊಂಡರು.
(ಮೊದಲ ಪುಟದಿಂದ)
ಗೌಡ ಮಹಿಳಾ ಕ್ರಿಕೆಟ್
ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟ ಹಾಗೂ ಗೌಡ ಯುವ ವೇದಿಕೆ ಸಹಯೋಗದಲ್ಲಿ ೨ನೇ ವರ್ಷದ ಗೌಡ ಮಹಿಳಾ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದ್ದು ತಾ. ೩ರಂದು (ಇಂದು) ನಡೆಯಲಿವೆ. ಒಟ್ಟು ೧೦ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ವಿಜೇತ ತಂಡಗಳಿಗೆ ಪ್ರಥಮ ರೂ. ೨೦ ಸಾವಿರ, ದ್ವಿತೀಯ ರೂ. ೧೦ ಸಾವಿರ ಹಾಗೂ ತೃತೀಯ ರೂ. ೫ ಸಾವಿರ ಬಹುಮಾನ ನೀಡಲಾಗುತ್ತದೆ.
ಉದ್ಘಾಟನಾ ಸಮಾರಂಭ
ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮೂಟೇರ ಪುಷ್ಪಾವತಿ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವನ್ನು ಮರಗೋಡಿನ ಕೃಷಿ ಸಾಧಕರು ಹಾಗೂ ಕಾಫಿ ಬೆಳೆಗಾರರಾದ ಕಟ್ಟೆಮನೆ ಪ್ರೇಮಾ ಗಣೇಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಸ್ಥಾಪಕಾಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ನಗರಸಭಾ ಸದಸ್ಯೆ ಕುಟ್ಟನ ಶ್ವೇತಾ ಪ್ರಶಾಂತ್, ಕಾಫಿ ಬೆಳೆಗಾರರಾದ ದಂಬೆಕೋಡಿ ಲೀಲಾ ಚಿಣ್ಣಪ್ಪ, ಮೂಟೇರ ಬೀನಾ ಸ್ಟಾರ್ಸನ್, ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆÀ ವಿನುತ ಪಾತಿಕಲ್ಲು ಸುಳ್ಯ ಹಾಗೂ ಅಶ್ವಿನಿ ಕೃಷ್ಣಕಾಂತ್ ಭಾಗವಹಿಸಲಿದ್ದಾರೆ.
ಪುರುಷರ ಕಬಡ್ಡಿ
ಕ್ರೀಡಾಕೂಟದಲ್ಲಿ ವಿಶೇಷ ಆಕರ್ಷಣೆಯಾಗಿ ಪುರುಷರ ಗೌಡ ಕುಟುಂಬವಾರು ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದ್ದು, ತಾ. ೩ರಂದು (ಇಂದು) ನಡೆಯಲಿದೆ. ಕೊಡಗು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ನ ಸಹಯೋಗದೊಂದಿಗೆ ನಡೆಯುವ ಪಂದ್ಯಾವಳಿಯು ಬೆಳಿಗ್ಗೆ ೧೦.೩೦ ಗಂಟೆಗೆ ಆರಂಭಗೊಳ್ಳಲಿದೆ. ಪಂದ್ಯಾವಳಿಯಲ್ಲಿ ಒಟ್ಟು ೧೫ ಗೌಡ ಕುಟುಂಬ ತಂಡಗಳು ಭಾಗವಹಿಸಲಿದ್ದು, ಅಂತಿಮವಾಗಿ ವಿಜೇತರಾಗುವ ತಂಡಕ್ಕೆ ಪ್ರಥಮ ಬಹುಮಾನವಾಗಿ ರೂ. ೨೫ ಸಾವಿರ, ದ್ವಿತೀಯ ರೂ. ೧೦ ಸಾವಿರ ಹಾಗೂ ತೃತೀಯ ಮತ್ತು ನಾಲ್ಕನೆ ಸ್ಥಾನಗಳಿಗೆ ತಲಾ ರೂ. ೫ ಸಾವಿರ ಬಹುಮಾನ ನೀಡಲಾಗುತ್ತದೆ.
ಬೈಕ್ ಶೋ
ಪಂದ್ಯಾವಳಿಗೆ ಮತ್ತಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ತಾ. ೩ರಂದು (ಇಂದು) ಮಧ್ಯಾಹ್ನ ೧೨ ಗಂಟೆಗೆ ಕೊಡಗು ಸೂಪರ್ ಬೈಕ್ ಪ್ರದರ್ಶನ ಏರ್ಪಡಿಸಲಾಗಿದೆ.
ನಾಳೆ ಸಮಾರೋಪ
ಜಪಿಎಲ್ ೩ನೇ ಅವೃತ್ತಿಯ ಸಮಾರೋಪ ಸಮಾರಂಭ ತಾ. ೪ರಂದು ನಡೆಯಲಿದೆ. ಗೌಡ ಯುವ ವೇದಿಕೆ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭರದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಂಸದ ಪ್ರತಾಪ್ ಸಿಂಹ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೊಡಗು ಗೌಡ ಸಮಾಜಗಳ ಅಧ್ಯಕ್ಷ ಆನಂದ ಕರಂದ್ಲಾಜೆ, ಜಿಲ್ಲಾಧಿಕಾರಿ ವೆಂಕಟಾ ರಾಜಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಾರಿಕೆ ದಿನೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.
- ಸಂತೋಷ್