ಮಡಿಕೇರಿ, ಮೇ ೨: ಗೌರವಾನ್ವಿತ ನ್ಯಾಯಮೂರ್ತಿ ಡಾ.ಎಚ್.ಎನ್. ನಾಗಮೋಹನ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬAಧಪಟ್ಟAತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ನಡೆಯಲಿದೆ. ಅದರಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯು ಒಟ್ಟು ಮೂರು ಹಂತಗಳಲ್ಲಿ ನಡೆಯಲಿದೆ. ತಾ. ೫ ರಿಂದ ೧೭ ರವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ತಾ. ೧೯ ರಿಂದ ೨೧ ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ತಾ. ೧೯ ರಿಂದ ೨೩ ರವರೆಗೆ ಸ್ವಯಂ ಘೋಷಣೆ (ಆನ್‌ಲೈನ್ ಮೂಲಕ) ಸಮೀಕ್ಷೆ ಮಾಡಲಿದ್ದಾರೆ. ಈ ಸಮೀಕ್ಷೆ ಕಾರ್ಯದಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇಲ್ಲಿ ತಾ. ೫ ರಿಂದ ೧೭ ರವರೆಗೆ ಬೆಳಿಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ದೂ.ಸಂ. ೦೮೨೭೨-೨೨೫೫೩೧ ರ ಮೂಲಕ ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ದಾಖಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.