ನಾಪೋಕ್ಲು, ಮೇ ೨: ಮಡಿಕೇರಿ ತಾಲೂಕಿನ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಗೆ ಜಾಗೃತಿ ಕಿರಣ ಕನ್ನಡ ಪಾಕ್ಷಿಕ ಪತ್ರಿಕೆಯ ೧೧ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ನಡೆದ ಪತ್ರಿಕೆಯ ೧೧ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಸ್ಥಳೀಯ ಶಾಸಕ ನಾಡ ಭರತ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ ಬಿ.ಎಸ್., ಪಿಡಿಓ ಚಂದ್ರಮೌಳಿ ಹಾಗೂ ಉಪಾಧ್ಯಕ್ಷೆ ರೇಖಾ ಬಿ.ಎಸ್. ಹಾಜರಿದ್ದು ಪ್ರಶಸ್ತಿ ಸ್ವೀಕರಿಸಿದರು.

ರಾಜ್ಯದ ನಾನ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ‘ಕಾಯಕ ರತ್ನ' ಪ್ರಶಸ್ತಿ ಹಾಗೂ ಉತ್ತಮ ಆಡಳಿತ ನಿರ್ವಹಣೆಯ ಗ್ರಾಮ ಪಂಚಾಯಿತಿಗೆ ರಾಜ್ಯಮಟ್ಟದ ‘ಗ್ರಾಮ ಮಿತ್ರ' ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಜಾಗೃತಿ ಕಿರಣ ಪತ್ರಿಕೆಯ ಪ್ರಧಾನ ಸಂಪಾದಕ ಯಾಲ್ಪಿ ವಾಲಿ ಭಾಷಾ ತಿಳಿಸಿದರು.