ಮಡಿಕೇರಿ. ಮೇ ೨: ಮಂಗಳೂರಿನಲ್ಲಿ ಗುಂಪು ಹಲ್ಲೆಗೆ ಒಳಗಾಗಿ ವಯನಾಡಿನ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಖಂಡಿಸಿ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಗೆ ಒತ್ತಾಯಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)À ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಲ್ಲಿನ ಮಾರುಕಟ್ಟೆ ಮುಂಭಾಗ ಸೇರಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಇಂಡಿಯಾ (ಎಸ್‌ಡಿಪಿಐ)À ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಲ್ಲಿನ ಮಾರುಕಟ್ಟೆ ಮುಂಭಾಗ ಸೇರಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಒಬ್ಬ ಆರ್‌ಎಸ್‌ಎಸ್‌ಗೆ ನಿಷ್ಠೆಯಿಂದ ಇರುವ ನಾಯಕರ ಹಾಗೆ ಮಾತನಾಡಿದ್ದಾರೆ. ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇಂತಹದ್ದೊAದು ಅಮಾನ ವೀಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಸರ್ಕಾರ ತನಿಖೆಗೆ ಮೀನಾಮೇಷ ಎಣಿಸುತ್ತಿರುವುದು ದುರಾದೃಷ್ಟಕರ ಎಂದರು. ಕೂಡಲೇ ಸರ್ಕಾರ ಈ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಅಥವಾ ಸಿಐಡಿ ತನಿಖೆಗೆ ಒಪ್ಪಿಸಬೇಕು. ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ರೂ. ೫೦ ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ಮನ್ಸೂರ್ ಅಲಿ, ಕಾರ್ಯದರ್ಶಿ ಬಶೀರ್, ನಗರಾಧ್ಯಕ್ಷ ರಿಜ್ವಾನ್ ಸೇರಿದಂತೆ ಇನ್ನಿತರರು ಹಾಜರಿದ್ದರು.