ಮಡಿಕೇರಿ, ಮೇ ೨ : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಜಿಲ್ಲಾ ವಕ್ತಾರ ತೆನ್ನಿರ ಮೈನಾ ಅವರನ್ನು ತಕ್ಷಣ ಪೊಲೀಸರು ಬಂಧಿಸಬೇಕೆAದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ತೆನ್ನಿರ ಮೈನಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಬಂಧನಕ್ಕೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.
ವಿನಯ್ ಪ್ರಕರಣದಲ್ಲಿ ಪೊಲೀಸರ ಮೇಲೆ ಒತ್ತಡ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ರಾಜಕೀಯ ಪ್ರಭಾವವಿಲ್ಲದೆ ಪೊಲೀಸರು ಸ್ವತಂತ್ರವಾಗಿ ಕಾರ್ಯನಿರ್ವಹಿಸಿದ್ದರೆ ಇಷ್ಟೊತ್ತಿಗಾಗಲೇ ಮೈನಾ ಬಂಧನವಾಗುತ್ತಿತ್ತು. ಪೊಲೀಸರು ಅಸಹಾಯಕ ಸ್ಥಿತಿಯಲ್ಲಿರುವುದು ಸ್ಪಷ್ಟವಾಗುತ್ತಿದ್ದು, ಅನುಮತಿ ನೀಡಿದರೆ ಸಾರ್ವಜನಿಕರೇ ಮೈನಾ ಅವರನ್ನು ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸುವುದಾಗಿ ರಾಕೇಶ್ ದೇವಯ್ಯ ತಿಳಿಸಿದ್ದಾರೆ.