ವೀರಾಜಪೇಟೆ: ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಕಾಕೋಟುಪರಂಬು ಗ್ರಾಮ ಪಂಚಾಯಿತಿಯ ಬೆಳ್ಳುಮಾಡು ಕಾಲೋನಿಗೆ ೧೫ ಲಕ್ಷ ರೂಪಾಯಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿದರು.

ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ವೀರಾಜಪೇಟೆ ಕ್ಷೇತ್ರಾದ್ಯಂತ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಒದಗಿಸುತ್ತಿದ್ದು, ಶ್ರಮಜೀವಿಗಳಾದ ಕಾಲೋನಿ ನಿವಾಸಿಗಳ ಅನುಕೂಲಕ್ಕೆಂದು ಈ ರಸ್ತೆಯನ್ನು ಮಂಜೂರು ಮಾಡಿದ್ದು ಇದರ ಸದುಪಯೋಗವನ್ನು ಕಾಲೋನಿ ನಿವಾಸಿಗಳು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು, ಸ್ಥಳೀಯರು ಹಾಗೂ ಪ್ರಮುಖರು ಇದ್ದರು.

ಐಮಂಗಲ-ಚೆAಬೆಬೆಳ್ಳೂರು ರಸ್ತೆವೀರಾಜಪೇಟೆ: ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿಯ ಐಮಂಗಲ-ಚೆAಬೆಬೆಳ್ಳೂರು ರಸ್ತೆ ಅಭಿವೃದ್ಧಿಗೆ ೧೫ ಲಕ್ಷ ರೂಪಾಯಿಯ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಈ ಭಾಗದ ಸಾರ್ವಜನಿಕರ ಓಡಾಟಕ್ಕೆ ಇದು ಪ್ರಮುಖ ರಸ್ತೆಯಾಗಿದ್ದು, ಈ ಹಿಂದೆ ಸ್ಥಳೀಯರು ಹಾಗೂ ಪಕ್ಷದ ಪ್ರಮುಖರು ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಶಾಸಕರಲ್ಲಿ ಮನವಿ ಮಾಡಿದ್ದರು. ಅದರಂತೆ ಶಾಸಕರು ಈ ಭಾಗದ ರಸ್ತೆಯ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಈ ಭಾಗದÀ ಜನರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಳ್ಳುವ ನಿಟ್ಟಿನಲ್ಲಿ, ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ಗುಣಮಟ್ಟ ಕಾಪಾಡುವುದರೊಂದಿಗೆ ಮುಗಿಸಿಕೊಡಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ಸ್ಥಳೀಯರು ಇದ್ದರು.

ಮೈತಾಡಿ-ಮಲ್ಲಮಟ್ಟಿ ರಸ್ತೆ

ವೀರಾಜಪೇಟೆ: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈತಾಡಿ-ಮಲ್ಲಮಟ್ಟಿ ರಸ್ತೆ ಅಭಿವೃದ್ಧಿಗೆ ೧೫ ಲಕ್ಷ ರೂಪಾಯಿಯ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಉತ್ತಮ ಗುಣಮಟ್ಟದ ರಸ್ತೆಗೆ ಆದ್ಯತೆ ನೀಡಿದ್ದು, ಈ ರಸ್ತೆಯ ಕಾಮಗಾರಿಯೂ ಗುಣಮಟ್ಟದಿಂದ ಕೂಡಿರಬೇಕೆಂದು ಹೇಳಿದರು. ಅಧಿಕಾರಿಗಳು ಹಾಗೂ ಸಾರ್ವಜನಿಕರು ಪರಸ್ಪರ ಕೈ ಜೋಡಿಸುವುದರೊಂದಿಗೆ ಉತ್ತಮ ರೀತಿಯ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಈ ಸಂದರ್ಭದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷರು, ಸ್ಥಳೀಯರು ಹಾಗೂ ಪ್ರಮುಖರು ಇದ್ದರು.